ಹಾವೇರಿ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕನವಳ್ಳಿ ಗ್ರಾಮದಲ್ಲಿ ನಡೆದಿದೆ.
ಹನುಮಂತಪ್ಪ ಶಿವಪ್ಪ ಬಾಕಿರ್ (38) ಮೃತ ರೈತ.
ಇವರು 4.80 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಹಾಳಾಗಿದ್ದರಿಂದ ಸಾಲ ತೀರಿಸಲಾಗದೆ ಜಮೀನಿನಲ್ಲಿನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.