ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಲಿಂಗದಹಳ್ಳಿಯಲ್ಲಿ ಮಂಗಳವಾರ ನಡೆದಿದೆ.
ನಾಗರಾಜ ಬಸವಣ್ಣೆಪ್ಪ ಮಾಗನೂರ (28) ಮೃತ ರೈತ.
ಇವರು ಬ್ಯಾಂಕ್ ಹಾಗೂ ಖಾಸಗಿ ಫೈನಾನ್ಸ್ಗಳಲ್ಲಿ 3.35 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳು ಸಂರ್ಪೂಣ ಹಾಳಾಗಿ ಹೋಗಿದ್ದವು. ಇದರಿಂದ ಮನನೊಂದು ಮನೆಯಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.