ಜಿಲ್ಲೆ

ಸಾಲಬಾಧೆಯಿಂದ ರೈತ ವಿಷ ಸೇವಿಸಿ ಆತ್ಮಹತ್ಯೆ

Haveri - Kariyappa Aralikatti

ರಾಣೆಬೆನ್ನೂರ: ಸಾಲಬಾಧೆಯಿಂದ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗುಡ್ಡದಬೇವಿನಹಳ್ಳಿಯಲ್ಲಿ ಸೋಮವಾರ ಸಂಭವಿಸಿದೆ.
ಕರಬಸಪ್ಪ ಬಸವಂತಪ್ಪ ಹೆಡಿಯಾಲ (38) ಮೃತ ರೈತ.
ಇವರು ವಿವಿಧ ಬ್ಯಾಂಕ್‌ಗಳಲ್ಲಿ 7.25 ಲಕ್ಷ ರೂ. ಸಾಲ ತೆಗೆದುಕೊಂಡು ಕೃಷಿ ಮಾಡಿದ್ದರು. ಆದರೆ, ಬೆಳೆ ಸರಿಯಾಗಿ ಬಾರದ ಕಾರಣ ಸಾಲ ತೀರಿಸಲಾಗದೆ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.