ಜಿಲ್ಲೆ

ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Haveri - Kariyappa Aralikatti

ಹಾವೇರಿ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಟನೆ ತಾಲೂಕಿನ ಅಗಡಿ ಗ್ರಾಮದಲ್ಲಿ ನಡೆದಿದೆ.

ಆನಂದಪ್ಪ ಮೈಲಾರೆಪ್ಪ ಬಿದರಿ (34) ಮೃತ ರೈತ.

ಇವರು ಕೃಷಿಗಾಗಿ ಬ್ಯಾಂಕ್​ ಹಾಗೂ ಸಹಕಾರಿ ಸಂದಲ್ಲಿ 6 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಒಣಗಿ ಹಾಳಾಗಿ ಹೋಗಿತ್ತು. ಇದರಿಂದ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.