ಜಿಲ್ಲೆ

ವಿದ್ಯುತ್ ತಗುಲಿ ರೈತ ಸಾವು

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕೊಳವೆ ಬಾವಿಯ ವಿದ್ಯುತ್ ತಂತಿ ತಗುಲಿ ರೈತ ಮೃತಪಟ್ಟ ಘಟನೆ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ಕಲಕೇರಿ ಗ್ರಾಮದ ನಿಂಗಪ್ಪ ಬುಜಪ್ಪ ಖಜಗುನಟ್ಟಿ (50) ಮೃತ ರೈತ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತುಂಡರಿಸಿದ್ದ ಕೊಳವೆ ಬಾವಿಯ ವಿದ್ಯುತ್ ತಂತಿ ತಗುಲಿ ನಿಂಗಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.