ಜಿಲ್ಲೆ

ಕಾರು ಡಿಕ್ಕಿಯಾಗಿ ರೈತ ಮೃತ

ಅಭಿನಯ್ ಎಚ್.ಎಂ

ಕೊಳ್ಳೇಗಾಲ: ತಾಲೂಕಿನ ಉತ್ತಂಬಳ್ಳಿ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ರೈತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ತಾಲೂಕಿನ ಉತ್ತಂಬಳ್ಳಿ ಗ್ರಾಮದ ಬಸವಣ್ಣ(60) ಮೃತ್ತ ದುರ್ದೈವಿ.

ಈತ ಗ್ರಾಮದ ಹೊರವಲಯದ ಎನ್.ಎಚ್ ರಸ್ತೆ ಬಳಿ ಹಸುಗಳನ್ನು ಮೇಯಿಸುತ್ತಿದ್ದಾಗ ಹಂಪಾಪುರ ಕಡೆಯಿಂದ ಬಂದ ಕಾರು ರಸ್ತೆ ಪಕ್ಕದಲ್ಲಿ ನಿಂತಿದ್ದ ಬಸವಣ್ಣನಿಗೆ ಡಿಕ್ಕಿ ಹೊಡೆದಿದೆ. ಈ ಸಂಬಂಧ ಅಗರ-ಮಾಂಬಳ್ಳಿ ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಳ್ಳೇಗಾಲ ಸರ್ಕಾರಿ ಆಸ್ಪ ತ್ರೆಯಲ್ಲಿ ಶವಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ. ಅಪಘಾತ ಮಾಡಿದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಾಲಕ ಪರಾರಿಯಾಗಿದ್ದಾನೆ.