ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿ ಚೆನ್ನಾಪುರದಲ್ಲಿ ಟ್ರಾ$್ಯಕ್ಟರ್​ ಪಲ್ಟಿಯಾಗಿರುವುದು. 
ಜಿಲ್ಲೆ

ಟ್ರ್ಯಾಕ್ಟರ್​ ಪಲ್ಟಿಯಾಗಿ ಹೊಲದಲ್ಲೇ ರೈತ ಸಾವು

ಬೆಂಗಳೂರು ಗ್ರಾಮಾಂತರ ಡೆಸ್ಕ್

ತೂಬಗೆರೆ : ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿಯ ಚೆನ್ನಾಪುರದಲ್ಲಿ ಉಳುಮೆ ಮಾಡುವಾಗ ಟ್ರಾ$್ಯಕ್ಟರ್​ ಮುಗುಚಿಬಿದ್ದು, ರೈತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಗ್ರಾಮದ ನಿವಾಸಿ ಚಂದ್ರಪ್ಪ (50) ಮೃತ. ಮುಂಗಾರು ಪ್ರಾರಂಭವಾಗಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಮಂಗಳವಾರ ಜಮೀನಿನಲ್ಲಿ ಉಳುಮೆ ಮಾಡುವಾಗ ನಿಯಂತ್ರಣ ತಪ್ಪಿದ ಟ್ರಾ$್ಯಕ್ಟರ್​ ಪಲ್ಟಿಯಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಪುತ್ರ ಇದ್ದಾರೆ. ಕುಟುಂಬಸ್ಥರ ಆಕ್ರಂದ ಮುಗಿಲುಮುಟ್ಟಿತ್ತು. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳ ಪರಿಶೀಲಿಸಿದ್ದು, ಪ್ರಕರಣ ದಾಖಲಾಗಿದೆ.