ಕನಕಪುರ: ರೇಷ್ಮೆ ತೋಟಕ್ಕೆ ನೀರು ಹಾುಸಲು ತೆರಳಿದ್ದ ವ್ಯಕ್ತಿಯೊಬ್ಬ ಒಂಟಿ ಸಲಗದ ದಾಳಿಗೆ ಸಿಲುಕಿ ಸ್ಥಳದಲ್ಲಿಯೆ ಮೃತಪಟ್ಟ ದಾರುಣ ಘಟನೆ ತಾಲೂಕಿನ ಕೋಡಿಹಳ್ಳಿ ಹೋಬಳಿ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.
ಸ್ಥಳದಲ್ಲಿಯೆ ಮೃತಪಟ್ಟಿದನ್ನು ಗಮನಿಸಿದ ಸ್ಥಳಿಯರು ಕೂಡಲೆ ಅರಣ್ಯ ಇಲಾಖೆ ಹಾಗೂ ಗ್ರಾಮಸ್ಥರಿಗೆ ತಿಳಿಸಿದ್ದಾರೆ. ವಿಷಯ ತಿಳಿದ ಅರಣ್ಯ ಅಧಿಕಾರಿ ಅಂತೋಣಿ ಹಾಗೂ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿ ಶವವನ್ನು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ವಾರಸುದಾರರಿಗೆ ನೀಡಿದ್ದಾರೆ.