ಜಿಲ್ಲೆ

ಸಾಲಬಾಧೆಯಿಂದ ಕೆರೆಗೆ ಹಾರಿ ರೈತ ಆತ್ಮಹತ್ಯೆ

Haveri - Kariyappa Aralikatti

ಬ್ಯಾಡಗಿ: ಸಾಲಬಾಧೆಯಿಂದ ರೈತರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ತಿಪಲಾಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಹನುಮಂತಪ್ಪ ಪುಟ್ಟಪ್ಪ ಕೂಸಮ್ಮನವರ (55) ಮೃತ ರೈತ.

ಇವರು ಬ್ಯಾಂಕ್​ ಹಾಗೂ ವಿವಿಧ ಸಂಘ-ಸಂಸ್ಥೆಗಳಲ್ಲಿ 6.60 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸಂರ್ಪೂಣ ಹಾಳಾಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಬ್ಯಾಡಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.