ಜಿಲ್ಲೆ

ನೀರು ಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ಮೈಸೂರು-ಚಾಮರಾಜನಗರ ಜಿಲ್ಲೆಗಳ ಕೆರೆ ಕಟ್ಟೆಗಳ ಅಚ್ಚುಕಟ್ಟು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರು ಹರಿಸುವಂತೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

ನಗರದ ಜಾಲಹಳ್ಳಿಹುಂಡಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾಯಿಸಿದ ಪ್ರತಿಭಟನಾಕಾರರು ದಿಢೀರ್ ರಸ್ತೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ, ರಾಜ್ಯ ಸರ್ಕಾರ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಕೆರೆಕಟ್ಟೆಯ ಅಚ್ಚುಕಟ್ಟು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರು ಹರಿಸುವ ಮೂಲಕ ಅಂತರ್ಜಲ ವೃದ್ಧಿಸಿ,
ಜನ-ಜಾನುವಾರುಗಳಿಗೆ ಅನುಕೂಲ ಮಾಡಿ ರೈತರಿಗೆ ಪ್ರೋತ್ಸಾಹ ನೀಡಬೇಕು. ಜಿಲ್ಲೆಯ ಎಲ್ಲಾ ನಾಲೆಗಳಿಗೂ ತಕ್ಷಣವೇ ನೀರು ಹರಿಸಬೇಕು, ಭತ್ತ ಬೆಳೆಯಲು ನೀರು ಬಿಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ಏಕಾಏಕಿ ತಮಿಳುನಾಡಿಗೆ ನೀರು ಹರಿಸುವ ಪ್ರಯತ್ನ ಮಾಡುತ್ತಿದೆ. ಕಾಂಗ್ರೆಸ್ ವಿರೋಧಪಕ್ಷದ ಸ್ಥಾನದಲ್ಲಿದ್ದಾಗ ಮೇಕೆದಾಟು ಯೋಜನೆ ಪ್ರಾರಂಭಿಸುವುದಾಗಿ ಹೇಳಿದ್ದರು. ತಮಿಳುನಾಡಿಗೆ ನೀರು ಹರಿಸುವ ಪ್ರಯತ್ನ ಕೈ ಬಿಟ್ಟು ಮೇಕೆದಾಟು ಯೋಜನೆಯನ್ನು ಆರಂಭಿಸಬೇಕು. ಗ್ಯಾರೆಂಟಿ ಯೋಜನೆಗಳಲ್ಲಿ ಅಕ್ಕಿ ಕೊಡುತ್ತೇವೆ ಎಂದು ಹಣ ಕೊಡುತ್ತಿದ್ದಾರೆ. ರಾಜ್ಯದ ರೈತರು ಭತ್ತ ಬೆಳೆದರೆ ಅಕ್ಕಿ ಸಿಗುವುದಿಲ್ಲವೇ? ಜಿಲ್ಲೆಯಲ್ಲಿ ಕಬ್ಬು ಬೆಳೆ ಒಣಗುತ್ತಿದೆ. ನಾಲೆಗಳಿಗೆ ನೀರು ಹರಿಸಬೇಕು ಅದನ್ನು ಬಿಟ್ಟು ಹೈಕೋರ್ಟ್ ತೀರ್ಪು ಇದೆ, ತಮಿಳುನಾಡಿಗೆ ನೀರು ಹರಿಸಬೇಕು ಎಂದು ನೀರಾವರಿ ಸಚಿವರು ಹೇಳುತ್ತಿರುವುದು ರಾಜ್ಯ ಸರ್ಕಾರದ ಮೂರ್ಖತನವಾಗಿದೆ ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ಹಾಲಿನ ನಾಗರಾಜು, ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊನ್ನೂರು ಬಸವಣ್ಣ, ಯರಿಯೂರು ಮಹೇಶ್, ಹೆಗ್ಗೋಠಾರ ವಿಜಿ, ಹೆಗ್ಗವಾಡಿ ಮಹದೇವಸ್ವಾಮಿ, ಗೌಡಹಳ್ಳಿ ಷಡಕ್ಷರಿ, ಕುರುಬೂರು ಸಿದ್ದೇಶ್, ಮಂಜು, ಕಿನಕಹಳ್ಳಿ ಬಸವಣ್ಣ, ಕುಂತೂರು ನಂಜುಂಡಸ್ವಾಮಿ, ಮೇಲಾಜಿಪುರ ಕುಮಾರ್, ಕಿಳಲೀಪುರದ ಶಿವಮೂರ್ತಿ ಭಾಗವಹಿಸಿದ್ದರು.