ಜಿಲ್ಲೆ

ಹಿಂಗಾರು ಬೆಳೆ ಸಮೀಕ್ಷೆಗೆ ಸೂಚನೆ

Dharwada - Basavaraj Idli

ಹುಬ್ಬಳ್ಳಿ: ಕರ್ನಾಟಕ ಸರ್ಕಾರದ ಮಹತ್ವಕಾಂ ಯೋಜನೆ "ನನ್ನ ಬೆಳೆ ನನ್ನ ಹಕ್ಕು' ಅಡಿಯಲ್ಲಿ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಡಿಸೆಂಬರ್ 29ರಿಂದ ಆರಂಭಗೊಂಡಿದೆ.

ಕಳೆದ ವರ್ಷದಂತೆ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆ ವಿವರಗಳನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ರೈತರು ತಮ್ಮ ಜಮೀನಿನ ಬೆಳೆ ದಾಖಲಿಸಲು "ಹಿಂಗಾರು ರೈತರ ಬೆಳೆ ಸಮೀಕ್ಷೆ 2024' ಎಂಬ ಹೆಸರಿನ ಮೊಬೈಲ್ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು.

ಮೊಬೈಲ್ ಆ್ಯಪ್ ಬಳಕೆ ಮಾಡುವ ರೀತಿಯನ್ನು ರೈತರಿಗೆ ತಿಳಿಸಲು ಪ್ರತಿ ಗ್ರಾಮದಲ್ಲಿ ನುರಿತ ಖಾಸಗಿ ನಿವಾಸಿಗಳನ್ನು ನೇಮಿಸಲಾಗಿದೆ. ಅದೇ ರೀತಿ ಖಾಸಗಿ ನಿವಾಸಿಗಳಿಂದ ಕೂಡ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯನ್ನು ದಾಖಲೆ ಮಾಡುತ್ತಿದ್ದು, ರೈತರು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಸಂಪರ್ಕಿಸಲು ಕೋರಿದೆ.

ಬೆಳೆ ಸಮೀಕ್ಷೆ ಮಾಹಿತಿಯನ್ನು ಕನಿಷ್ಠ ಬೆಂಬಲ ಯೋಜನೆಯಡಿ ಆರ್ಹ ಲಾನುಭವಿಗಳನ್ನು ಗುರುತಿಸಲು, ಬೆಳೆ ವಿಮಾ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು, ಎನ್ಡಿಆರ್ ಎಫ್/ ಎಸ್ಡಿಆರ್ ಎಪ್ ಅಡಿಯಲ್ಲಿ ಪ್ರವಾಹ ಹಾಗೂ ಬರಗಾಲ ಸಂದರ್ಭದಲ್ಲಿ ನೀಡುವ ಬೆಳೆಹಾನಿ ಪರಿಹಾರ ವಿತರಿಸಲು. ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು ಸಾಂಖ್ಯಿಕ ಇಲಾಖೆ/ಕೃಷಿ/ ತೋಟಗಾರಿಕೆ/ರೇಷ್ಮೆ ಇಲಾಖೆಗಳ ಬೆಳೆ ವಿಸ್ತೀರ್ಣ ವರದಿ ಕಾರ್ಯದಲ್ಲಿ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ/ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕೆ ಬಳಸಿಕೊಳ್ಳಲಾಗುತ್ತದೆ.

ಈ ಅಂಶಗಳನ್ನು ತಾಲೂಕಿನ ರೈತರು ಗಮನದಲ್ಲಿಟ್ಟುಕೊಂಡು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕು. ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ನಿಖರವಾಗಿ ತಾವೇ ಸಮೀಕ್ಷೆ ಮಾಡಲು ಕೋರಲಾಗಿದೆ.