ಗುಂಡ್ಲುಪೇಟೆ ಪಟ್ಟಣದ ಪ್ರವಾಸಿ ಮಂದಿರದ ಎದುರು ರೈತ ಸಂಘದ ಕಾರ್ಯಕರ್ತರು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು. ಹೊನ್ನೂರು ಪ್ರಕಾಶ್, ಸಂಪತ್ತು, ಷಣ್ಮುಖಸ್ವಾಮಿ ಇದ್ದರು. 
ಜಿಲ್ಲೆ

ರಸ್ತೆ ಸಂಚಾರ ತಡೆದು ರೈತರ ಆಕ್ರೋಶ

ಗುಂಡ್ಲುಪೇಟೆ: ರೈತರ ಬಗ್ಗೆ ಸಚಿವ ಶಿವಾನಂದ ಪಾಟೀಲ್ ಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಹಸಿರುಸೇನೆ ಹಾಗೂ ರೈತ ಸಂಘದ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಹಸಿರುಸೇನೆ ಹಾಗೂ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್‌ನೇತೃತ್ವದಲ್ಲಿ ಪ್ರವಾಸಿ ಮಂದಿರದ ಎದುರು ಹಾಗೂ ತಾಲೂಕು ಅಧ್ಯಕ್ಷ ದಿಲೀಪ್ ನೇತೃತ್ವದಲ್ಲಿ ಪಟ್ಟಣದ ಬಸವೇಶ್ವರ ವೃತ್ತದ ಬಳಿ ಪ್ರತ್ಯೇಕವಾಗಿ ಜಮಾಯಿಸಿದ ಪ್ರತಿಭಟನಾಕಾರರು, ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಸಚಿವ ಶಿವಾನಂದ ಪಾಟೀಲ್ ವಿರುದ್ಧ ಘೋಷಣೆ ಕೂಗಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಪಾಟೀಲರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿ ಕೆಲಕಾಲ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟುಮಾಡಿದರು.

ಸಂಘದ ಪದಾಧಿಕಾರಿಗಳಾದ ಕುಂದಕೆರೆ ಸಂಪತ್ತು, ಹೊಸೂರು ಮಹೇಶ್, ಬೆಟ್ಟದ ಮಾದಹಳ್ಳಿ ಷಣ್ಮುಖಸ್ವಾಮಿ, ಮಹದೇವಪ್ಪ, ಟಿ.ಎಸ್.ಶಾಂತಮಲ್ಲಪ್ಪ, ಹಂಗಳ ಮಾಧು ಸೇರಿದಂತೆ ಹಲವರು ಇದ್ದರು.