ಧಾರವಾಡ: ನೈಸರ್ಗಿಕ ವಿಕೋಪಗಳಾದ ಪ್ರವಾಹ ಹಾಗೂ ಅತಿವೃಷ್ಟಿಯಿಂದ 2025ರ ಆಗಸ್ಟ್ನಲ್ಲಿ ಆದ ಬೆಳೆಹಾನಿಗೆ ಪರಿಹಾರ ಪಾವತಿಸಲು ಜಂಟಿ ಸಮೀಕ್ಷೆ ಮಾಡಲಾಗಿದೆ. ಜಿಲ್ಲೆಯಾದ್ಯಂತ 88,970.90 ಹೆಕ್ಟೇರ್ ಕೃಷಿ ಮತ್ತು 4,526.08 ಹೆಕ್ಟೇರ್ ತೋಟಗಾರಿಕೆ ಬೆಳೆ ಸೇರಿ 93,496.98 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಬೆಳೆಗಳು ಹಾನಿಯಾಗಿವೆ. ಸಂತ್ರಸ್ತ ರೈತರ ಕರಡು ಪಟ್ಟಿಯನ್ನು ಜಿಲ್ಲಾಽಕಾರಿ, ಉಪ ವಿಭಾಧಿಕಾರಿ, ತಹಸೀಲ್ದಾರರು, ಗ್ರಾಮ ಪಂಚಾಯಿತಿ ಕಚೇರಿ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳಿದ್ದರೆ ತಹಸೀಲ್ದಾರ್, ಕೃಷಿ ಅಥವಾ ತೋಟಗಾರಿಕೆ ಇಲಾಖೆ ಕಚೇರಿ, ರೈತ ಸಂಪರ್ಕ ಕೇಂದ್ರಗಳಲ್ಲಿ ಸೆ. 7ರೊಳಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.