ಬೈಲಹೊಂಗಲ ತಾಲೂಕಿನ ಮತ್ತಿಕೊಪ್ಪ ಐಸಿಎಆರ್-ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಮಗ್ರ ಪೋಷಕಾಂಶ ಸರ್ಟಿಫಿಕೇಟ್ ತರಬೇತಿ ಕಾರ್ಯಕ್ರಮ ಜರುಗಿತು. ಬಿ.ಆರ್.ಪಾಟೀಲ, ಮಂಜುನಾಥ ಚೌರಡ್ಡಿ ಇತರರಿದ್ದರು. 
ಜಿಲ್ಲೆ

ರೈತರಿಗೆ ಗೊಬ್ಬರ ಬಳಕೆ ತಿಳಿವಳಿಕೆ ನೀಡಲಿ

ಬೆಳಗಾವಿ: ಹಸಿರೆಲೆ ಗೊಬ್ಬರ ಉಪಯೋಗ ಹಾಗೂ ಮಣ್ಣು ಪರೀಕ್ಷೆ ಆಧಾರಿತ ರಾಸಾಯನಿಕ ಗೊಬ್ಬರಗಳ ಬಳಕೆ ಕುರಿತು ಶಿಬಿರಾರ್ಥಿಗಳು ರೈತರಿಗೆ ನಿರಂತರವಾಗಿ ತಿಳಿಹೇಳಬೇಕು ಎಂದು ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರದ ಕಾರ್ಯಾಧ್ಯಕ್ಷ ಬಿ.ಆರ್. ಪಾಟೀಲ ಹೇಳಿದರು.

ಬೈಲಹೊಂಗಲ ತಾಲೂಕಿನ ಮತ್ತಿಕೊಪ್ಪ ಐಸಿಎಆರ್-ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಮಗ್ರ ಪೋಷಕಾಂಶ ಸರ್ಟಿಫಿಕೇಟ್ ತರಬೇತಿ ಯಶಸ್ವಿಯಾಗಿ ಪೂರೈಸಿದ ವಿತರಕರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ರೈತರ ಹಾಗೂ ಕೃಷಿ ವಿಜ್ಞಾನಿಗಳ ಮಧ್ಯೆ ಸೇತುವೆಯಂತೆ ಕೆಲಸ ಮಾಡುವ ಇನ್‌ಪುಟ್ ವಿತರಕರು ಈ ತರಬೇತಿಯಿಂದ ಹೆಚ್ಚಿನ ಜ್ಞಾನ ಪಡೆದುಕೊಳ್ಳುವಂತಾಗಿದ್ದು, ಇದರಿಂದ ರೈತರಿಗೆ ಹೆಚ್ಚಿನ ಮತ್ತು ಮೌಲ್ಯಯುತ ಸೇವೆ ಒದಗಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಕೇಂದ್ರದ ವಿಜ್ಞಾನಿ ಡಾ.ಮಂಜುನಾಥ ಚೌರಡ್ಡಿ ಮಾತನಾಡಿ, ರೈತರ ಸಮಸ್ಯೆಗಳಿಗೆ ವಿತರಕರು ವಿಜ್ಞಾನಿಗಳೊಂದಿಗೆ ಚರ್ಚಿಸಿ, ವೈಜ್ಞಾನಿಕವಾಗಿ ಪರಾಮರ್ಶಿಸಿ ರೈತರಿಗೆ ಸ್ಪಂದಿಸುವಂತೆ ತಿಳಿಸಿದರು. ಕೆವಿಕೆ ಎಸ್.ಎಂ. ವಾರದ, ಪ್ರವೀಣ ಯಡಹಳ್ಳಿ, ಡಾ. ಎಸ್. ಎಸ್. ಹಿರೇಮಠ ಇತರರಿದ್ದರು.