ಜಿಲ್ಲೆ

ಮುಂಗಾರು ಕೃಷಿಗೆ ರೈತರು ಸಜ್ಜು

ಮಡಿಕೇರಿ:

2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೊಡಗು ಜಿಲ್ಲೆಯಲ್ಲಿ ಈವರೆಗೆ 316.1 ಮಿ.ಮಿ. ಮಳೆಯಾಗಿದ್ದು, ವಾಡಿಕೆಗಿಂತ ಶೇ.30 ರಷ್ಟು ಹೆಚ್ಚಾಗಿ ಮಳೆಯಾಗಿರುತ್ತದೆ. ರೈತರು ಮುಂಗಾರು ಹಂಗಾಮಿನ ಪೂರ್ವ ಸಿದ್ದತೆಯಲ್ಲಿದ್ದು, ಜಿಲ್ಲೆಯಲ್ಲಿ ಭತ್ತದ ಸಸಿ ಮಡಿ ಕಾರ್ಯ ಜೂನ್ ಅಂತ್ಯದಿAದ ಪ್ರಾರಂಭವಾಗಲಿದೆ. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ನಾಟಿ ಕಾರ್ಯಕೈಗೊಳ್ಳಲಾಗುತ್ತದೆ.

ಮುಸುಕಿನ ಜೋಳದ ಬಿತ್ತನೆ ಕಾರ್ಯ ಜೂನ್‌ನಲ್ಲಿ ಕೈಗೊಳ್ಳಲಾಗುತ್ತದೆ. ಈ ಹಿನ್ನೆಲೆಯಲ್ಲಿ ರೈತರಿಗೆ ಅನುಕೂಲವಾಗುವಂತೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಇತರೆ ಕೃಷಿ ಪರಿಕರಗಳನ್ನು ದಾಸ್ತಾನೀಕರಿಸಲಾಗುತ್ತಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಸೋಮಸುಂದರ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಒಟ್ಟು 1,871 ಕ್ವಿಂಟಾಲ್ ಭತ್ತ ಮತ್ತು 41 ಕ್ವಿಂಟಾಲ್ ಮುಸುಕಿನ ಜೋಳದ ಬಿತ್ತನೆ ಬೀಜಗಳನ್ನು ದಾಸ್ತಾನೀಕರಿಸುವ ಗುರಿ ಹೊಂದಲಾಗಿದೆ. ರೈತರಿಗೆ ಅವಶ್ಯವಿರುವ ವಿವಿಧ ತಳಿಗಳ ಬಿತ್ತನೆ ಬೀಜಗಳನ್ನು ಕೆ.ಎಸ್.ಎಸ್.ಸಿ, ಎನ್.ಎಸ್.ಸಿ ಹಾಗೂ ಖಾಸಗಿ ಸಂಸ್ಥೆಗಳಿAದ ಸರಬರಾಜು ಪಡೆದು ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಗುರುವಾರದ (ಮೇ 30) ಮಾಹಿತಿ ಪ್ರಕಾರ ಒಟ್ಟು 503 ಕ್ವಿಂಟಾಲ್ ಭತ್ತ ಹಾಗೂ 2.4 ಕ್ವಿಂಟಾಲ್ ಮುಸುಕಿನ ಜೋಳದ ವಿವಿಧ ತಳಿಯ ಬಿತ್ತನೆ ಬೀಜಗಳನ್ನು ದಾಸ್ತಾನೀಕರಿಸಲಾಗಿದೆ

ಮುಂಗಾರು ಹಂಗಾಮಿನಲ್ಲಿ ಜಿಲ್ಲೆಗೆ ಒಟ್ಟು 80,946 ಮೆ.ಟನ್ ವಿವಿಧ ಗ್ರೇಡ್‌ಗಳ ರಸಗೊಬ್ಬರಗಳಿಗೆ ಬೇಡಿಕೆ ಇದ್ದು, ಮೇ ತಿಂಗಳ ಕೊನೆಯ ತನಕ 24,321 ಮೆ.ಟನ್ ರಸಗೊಬ್ಬರ ಬೇಡಿಕೆ ಇದ್ದು, ಒಟ್ಟು 35,062 ಮೆ.ಟನ್ ರಸಗೊಬ್ಬರಗಳು ವಿವಿಧ ಸಹಕಾರ ಸಂಘ ಮತ್ತು ಖಾಸಗಿ ಸಂಸ್ಥೆಗಳಲ್ಲಿ ದಾಸ್ತಾನು ಇಡಲಾಗಿದೆ.

ಜಿಲ್ಲೆಯ ರೈತರ ಬೇಡಿಕೆ ಹಾಗೂ ಗುರಿ ಅನ್ವಯ ಹಂತ ಹಂತವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಪೂರೈಸಲಾಗುವುದೆಂದು ಜಂಟಿ ಕೃಷಿ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ವಿರಾಜಪೇಟೆ ತಾಲೂಕಿನಲ್ಲಿ ಒಟ್ಟು 165 ಕ್ವಿಂಟಾಲ್, ಪೊನ್ನಂಪೇಟೆ ತಾಲೂಕಿನಲ್ಲಿ 130 ಕ್ವಿಂಟಾಲ್,
ಸೋಮವಾರಪೇಟೆ ತಾಲೂಕಿನಲ್ಲಿ 63 ಕ್ವಿಂಟಾಲ್, ಕುಶಾಲನಗರ ತಾಲೂಕಿನಲ್ಲಿ 70 ಕ್ವಿಂಟಾಲ್ ಹಾಗೂ ಮಡಿಕೇರಿ ತಾಲೂಕಿನಲ್ಲಿ ಒಟ್ಟು 75 ಕ್ವಿಂಟಾಲ್ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 503 ಕ್ವಿಂಟಾಲ್ ಭತ್ತದ ಬಿತ್ತನೆ ಬೀಜ ಹೋಬಳಿ ಕೇಂದ್ರಗಳ ರೈತರ ಸಂಪರ್ಕ ಕೇಂದ್ರದಲ್ಲಿ ಲಭ್ಯವಿದೆ. ಸೋಮವಾರಪೇಟೆ ತಾಲೂಕಿನಲ್ಲಿ 0.8
ಒಟ್ಟು 0.8 ಕ್ವಿಂಟಾಲ್ ಮತ್ತು ಕುಶಾಲನಗರ ತಾಲೂಕಿನಲ್ಲಿ 1.6 ಕ್ವಿಂಟಾಲ್ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 2.4 ಕ್ವಿಂಟಾಲ್ ಜೋಳದ ಬಿತ್ತನೆ ಬೀಜ ರೈತರಿಗೆ ಲಭ್ಯವಿದೆ.

2024ನೇ ಸಾಲಿನ ಮುಂಗಾರು ಹಂಗಾಮಿಗಾಗಿ ರಸಗೊಬ್ಬರವನ್ನೂ ಸಂಗ್ರಹಿಸಲಾಗಿದ್ದು ಯೂರಿಯಾ 9334.91 ಮೆಟ್ರಿಕ್ ಟನ್, ಡಿಎಪಿ 2495.8 ಮೆಟ್ರಿಕ್ ಟನ್, ಎಂಒಪಿ 4992.89 ಮೆಟ್ರಿಕ್ ಟನ್, ಎನ್‌ಪಿಕೆಎಸ್ 15534.32 ಮೆಟ್ರಿಕ್ ಟನ್, ಎಸ್‌ಎಸ್‌ಪಿ 704.1 ಮೆಟ್ರಿಕ್ ಟನ್ ಸೇರಿದಂತೆ 35062.02 ಮೆಟ್ರಿಕ್ ಟನ್‌ಗಳಷ್ಟು ವಿವಿಧ ಮಾದರಿಯ ರಸಗಿಬ್ಬರಗಳನ್ನು ದಾಸ್ತಾನು ಇಡಲಾಗಿದೆ.