ಜಿಲ್ಲೆ

ಸಿಎಂ ಗಮನಕ್ಕೆ ರೈತರ ಸಮಸ್ಯೆ

ವೀರೇಶ ಸೌದ್ರಿ

ಯಲ್ಲಾಪುರ: ಕೇಂದ್ರ ನಬಾರ್ಡ್ ಸಂಸ್ಥೆಯು ರಾಜ್ಯಕ್ಕೆ ರಿಯಾಯಿತಿ ಬಡ್ಡಿ ದರದಲ್ಲಿ ಕೃಷಿ ಸಾಲಗಳನ್ನು ಕಡಿಮೆ ಪ್ರಮಾಣದಲ್ಲಿ ಹಂಚಿಕೆ ಮಾಡಿರುವುದರಿಂದ ರೈತರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವರಾಮ ಹೆಬ್ಬಾರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ವಿವರಿಸಿದರು.

ಸಹಕಾರಿ ಸಚಿವರಾದ ಕೆ.ಎನ್. ರಾಜಣ್ಣ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಸಡಿದ ಹೆಬ್ಬಾರ, ಜಿಲ್ಲೆಯ ರೈತರ ಸ್ಥಿತಿಗತಿಗಳನ್ನು ಗಮನಕ್ಕೆ ತಂದರು. ಕೇಂದ್ರ ನಬಾರ್ಡ್ ಸಂಸ್ಥೆಯು ಕೃಷಿ ಸಾಲಗಳನ್ನು ಕಡಿಮೆ ಪ್ರಮಾಣದಲ್ಲಿ ಹಂಚಿಕೆ ಮಾಡಿರುವುದರಿಂದ ರೈತರಿಗೆ ತೊಂದರೆಯಾಗಲಿದೆ. ಕೃಷಿ ಭೂಮಿ ಅಭಿವೃದ್ಧಿಗೆ ರೈತರು ಆರ್ಥಿಕ ಸಮಸ್ಯೆ ಎದುರಿಸುವಂತಾಗಿದೆ. ಈ ಕುರಿತು ಸಂಬಂಧಪಟ್ಟವರ ಗಮನಕ್ಕೆ ತಂದು ರೈತರ ನೆರವಿಗೆ ಧಾವಿಸಬೇಕೆಂದು ಆಗ್ರಹಿಸಿದರು.