ಜಿಲ್ಲೆ

ರಾಜ್ಯಾದ್ಯಂತ ರೈತರ ಪ್ರತಿಭಟನೆ

Davangere - Desk - Mahesh Babu E

ಚಿತ್ರದುರ್ಗ: ಬರಗಾಲದ ಸನ್ನಿವೇಶದಲ್ಲಿ ಸಾಲ ವಸೂಲಿ ಮಾಡಬಾರದು. ಆನ್‌ಲೈನ್‌ನಲ್ಲಿ ಆಸ್ತಿ ಹರಾಜು ನಡೆಯುತ್ತಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ ಬೇಸರ ವ್ಯಕ್ತಪಡಿಸಿದರು.

ಸಿರಿಗೆರೆಯಲ್ಲಿ ಭಾನುವಾರ ಹಮ್ಮಿಕೊಡಿದ್ದ ಶ್ರೀ ಶಿವಕುಮಾರ ಶಿವಾಚಾರ‌್ಯ ಸ್ವಾಮೀಜಿ ಅವರ 31ನೇ ಶ್ರದ್ಧಾಂಜಲಿ ಸಮಾರಂಭದಲ್ಲಿ ಮಾತನಾಡಿದರು.

ಕೃಷಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.25ರಂದು ರಾಜ್ಯದೆಲ್ಲ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ರೈತರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಹೇಳಿದರು.