ತುಮಕೂರು: ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲು ಮುಂದಾಗಿರುವ ವಿದ್ಯುತ್ ತಿದ್ದುಪಡಿ ಮಸೂದೆ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂ ಹಾಗೂ ಹಸಿರು ಸೇನೆ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ವಿದ್ಯುತ್ ಮೀಟರ್‌ಗಳನ್ನು ಸುಟ್ಟು ಪ್ರತಿಭಟಿಸಿದರು.
ಕರ್ನಾಟಕ ರಾಜ್ಯ ರೈತ ಸಂ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ಆನಂದ ಪಟೇಲ್ ನೇತೃತ್ವದಲ್ಲಿ ನಗರದ ಬಿಜಿಎಸ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ವಿದ್ಯುತ್ ಮೀಟರ್ ಪ್ರದರ್ಶಿಸುತ್ತಾ ಮೆರವಣಿಗೆ ನಡೆಸಿದ ರೈತರು, ಜಿಲ್ಲಾಧಿಕಾರಿ ಕಚೇರಿ ಎದುರು ಮೀಟರ್ ಒಡೆದು, ಬೆಂಕಿ ಹೆಚ್ಚಿ ವಿದ್ಯುತ್ ಸರಬರಾಜು ಕಂಪನಿಗಳ ಖಾಸಗೀಕರಣದ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧ್ಯಕ್ಷ ಆನಂದ ಪಟೇಲ್ ಮಾತನಾಡಿ, ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಹಲವು ರೈತ, ಜನ, ಕಾರ್ಮಿಕ ವಿರೋಧಿ ಕಾನೂನುಗಳು ಈ ದೇಶದ ದುಡಿವ ಜನರನ್ನು ಕಾರ್ಪೋರೇಟ್ ಕಂಪನಿಗಳ ಗುಲಾಮರನ್ನಾಗಿಸುವ ಹುನ್ನಾರ ಅಡಗಿದೆ. ಹಾಗಾಗಿ, ಇಡೀ ದೇಶದಾದ್ಯಂತ ರೈತರು ವಿದ್ಯುತ್ ಖಾಸಗೀಕರಣ ಬಿಲ್ ವಿರುದ್ದ ಪ್ರತಿಭಟನೆಗೆ ಇಳಿದಿದ್ದಾರೆ ಎಂದು.
ದೇಶದ ಶೇ.70 ಜನರು ಕೃಷಿಯನ್ನೇ ನಂಬಿ ಬದುಕುತ್ತಿದ್ದಾರೆ. ಹವಾವಾನ ವೈಪರೀತ್ಯ, ಬರ, ನೆರೆಯಂಥ ಹಲವು ಸಮಸ್ಯೆಗಳ ನಡುವೆಯೂ ಅವರೆಲ್ಲರೂ ದೇಶದ ಜನರಿಗೆ ಅನ್ನ ನೀಡುತ್ತಿದ್ದಾರೆ. ಇಂಥ ಸ್ವಾವಲಂಬಿ ಕ್ಷೇತ್ರವನ್ನು ಖಾಸಗಿ ಕಂಪನಿಗಳ ಕಪಿಮುಷ್ಠಿಗೆ ನೀಡಲು ಹೊರಟಿರುವುದು ಸರಿಯಲ್ಲ ಎಂದರು.
ರೈತ ಸಂ ಹಾಗೂ ಹಸಿರು ಸೇನೆಯ ಜಿಲ್ಲಾ ಕಾರ್ಯಾಧ್ಯಕ್ಷ ಧನಂಜಯ್ಯ ಆರಾಧ್ಯ ವಾತನಾಡಿ, ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳಿಂದ ರೈತರ ಆದಾಯದಲ್ಲಿ ಗಣನೀಯ ಕುಸಿತವಾಗಿದೆ. ಕೃಷಿ ರಾಜ್ಯ ವಲಯದಲ್ಲಿದ್ದರೂ, ಕೇಂದ್ರ ಸರ್ಕಾರ ಕಾಯ್ದೆಗಳ ರೂಪದಲ್ಲಿ ಅದರ ಮೇಲೆ ಪರೋಕ್ಷವಾಗಿ ಹತೋಟಿ ಸಾಧಿಸಲು ಮುಂದಾಗಿದೆ. ಇಂಥ ನೀತಿಗಳು ಒಕ್ಕೂಟ ವ್ಯವಸ್ಥೆಯಲ್ಲಿ ಒಳ್ಳೆಯ ಬೆಳವಣಿಗೆಯಲ್ಲ ಎಂದರು.
ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿ ಅವರಿಗೆ ಮನವಿ ಪತ್ರವನ್ನು ಕಳುಹಿಸಲಾಯಿತು.
ಪ್ರತಿಭಟನೆಯಲ್ಲಿ ರೈತ ಸಂ ಹಾಗೂ ಹಸಿರು ಸೇನೆಯ ಕೊರಟಗೆರೆ ತಾಲೂಕು ಅಧ್ಯಕ್ಷ ಕೋಡ್ಲಹಳ್ಳಿ ಸಿದ್ದರಾಜು, ಕುಣಿಗಲ್ ತಾಲೂಕು ಅಧ್ಯಕ್ಷ ಅನಿಲ್‌ಕುವಾರ್, ತಿಪಟೂರು ತಾಲೂಕು ಅಧ್ಯಕ್ಷ ಪುಟ್ಟರಾಜು, ಶಿರಾ ತಾಲೂಕು ಅಧ್ಯಕ್ಷ ಸಣ್ಣ ದ್ಯಾಮೇಗೌಡ, ಗಂಗರಾಜು, ಕೀರ್ತಿ, ಬಸ್ತಿಹಳ್ಳಿ ರಾಜಣ್ಣ, ರುದ್ರೇಶಗೌಡ ಮತ್ತಿತರರು ಇದ್ದರು.