ಜಿಲ್ಲೆ

ನಡಹಳ್ಳಿ ನೇತೃತ್ವದಲ್ಲಿ ರೈತರ ಪ್ರತಿಭಟನೆ

ಮುದ್ದೇಬಿಹಾಳ: ನಕಲಿ ತೊಗರಿ ಬೀಜ ಮಾರಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು, ತೊಗರಿ ಬೆಳೆ ಹಾನಿ ಅನುಭವಿಸಿರುವ ರೈತರ ವಾಸ್ತವಾಂಶಗಳ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ, ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ತಾಲೂಕಿನ ತೊಗರಿ ಬೆಳೆಗಾರರು ಡಿ.3 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಬೆಳಗ್ಗೆ 10 ಗಂಟೆಗೆ ಬಿದರಕುಂದಿ ಕ್ರಾಸ್‌ನಿಂದ ರೈತರ ಟ್ರಾೃಕ್ಟರ್, ಎತ್ತಿನ ಬಂಡಿ ರ‌್ಯಾಲಿ ಅಂಬೇಡ್ಕರ್, ಬಸವೇಶ್ವರ ವೃತ್ತ ಮಾರ್ಗವಾಗಿ ಸಂಚರಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಿದೆ. ಬೆಳೆ ಹಾನಿ ಅನುಭವಿಸಿದ ತೊಗರಿ ಬೆಳೆಗಾರರಿಗೆ ಪರಿಹಾರ ಕೊಡಿಸಲು ಆಗ್ರಹಿಸಿ ನಡೆಸುತ್ತಿರುವ ಈ ಹೋರಾಟದಲ್ಲಿ ಎಲ್ಲ ರೈತರು ಪಾಲ್ಗೊಳ್ಳಬೇಕು ಎಂದು ಬಿಜೆಪಿ ಮುದ್ದೇಬಿಹಾಳ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ರೈತ ಮೋರ್ಚಾ ಅಧ್ಯಕ್ಷ ಶಂಕರಗೌಡ ಶಿವಣಗಿ ಕಂದಗನೂರ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.