ಜಿಲ್ಲೆ

ಬಜೆಟ್‌ನಲ್ಲಿ ರೈತರ ಸಾಲ ಮನ್ನಾ ಮಾಡದಿದ್ದರೆ ಸಿಎಂಗೆ ಕಪ್ಪು ಭಾವುಟ ಪ್ರದರ್ಶನ : ರೈತ ಸಂಘ ಎಚ್ಚರಿಕೆ

ಮೈಸೂರು: ಈ ಬಾರಿಯ ಬಜೆಟ್‌ನಲ್ಲಿ ರೈತರ ಸಾಲ ಸಂಪೂರ್ಣ ಮನ್ನ ಮಾಡಬೇಕು ಎಂದು ರಾಜ್ಯ ರೈತ ಸಂಘ ರೈತ ಬಣದ ರಾಜ್ಯಾಧ್ಯಕ್ಷ ಇ.ಎನ್. ಕೃಷ್ಣೇಗೌಡ ಆಗ್ರಹಿಸಿದರು.

ಬಜೆಟ್‌ನಲ್ಲಿ ಕೃಷಿ, ನೀರಾವರಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಸರ್ಕಾರ ರೈತ ಪರವಾದ ಬಜೆಟ್ ಮಂಡಿಸದೆ ಇದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳುವ ಕಾರ್ಯಕ್ರಮಗಳಲ್ಲಿ ಕಪ್ಪು ಭಾವುಟ ಪ್ರದರ್ಶಿಸಲಾಗುವುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು.

ರಾಷ್ಟ್ರೀಕೃತ ಬ್ಯಾಂಕ್‌ಗಳು, ಮೈಕ್ರೋಫೈನಾನ್ಸ್‌ಗಳು ರೈತರು ಮತ್ತು ಗ್ರಾಮೀಣ ಪ್ರದೇಶದ ಮಹಿಳೆಯರಿಂದ ಬಲವಂತವಾಗಿ ಸಾಲ ವಸೂಲಿ ಮಾಡುವುದು ಮುಂದುವರೆದಿದ್ದು, ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆಗೆ ಕವಡೆ ಕಾಸಿನ ಬೆಲೆ ಇಲ್ಲದಂತಾಗಿದೆ. ಹೀಗಾಗಿ ಸರ್ಕಾರ ಅಧಿಕಾರಿಗಳಿಗೆ ಹೆಚ್ಚಿನ ಜವಾಬ್ದಾರಿ ನೀಡಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡರಾದ ಪುಟ್ಟಸ್ವಾಮಿ ನಾಯಕ, ಮಲ್ಲೇಶ್ ನಾಯಕ, ಕೆಂಪರಾಜು ಹಾಜರಿದ್ದರು.