ಜಿಲ್ಲೆ

ಅಪ್ಪ-ಅಮ್ಮ ಕಣ್ಣಿಗೆ ಕಾಣುವ ದೇವರು

Avinash R

ಕಡಬ: ಕಡಬ ಸರಸ್ವತಿ ವಿದ್ಯಾಲಯ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ-ಪಾಲಕರೊಂದಿಗೆ ಸಂವಾದ ಹಾಗೂ ಪಾದಪೂಜನಾ ಕಾರ್ಯಕ್ರಮ ಸಂಸ್ಥೆಯ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಶೈಕ್ಷಣಿಕ ಪರಿವೀಕ್ಷಣಾಧಿಕಾರಿ ರಘುರಾಜ್ ಉಬರಡ್ಕ ಮಾತನಾಡಿ, ಅಪ್ಪ-ಅಮ್ಮ ಕಣ್ಣಿಗೆ ಕಾಣುವ ದೇವರು. ಅವರ ಪೂಜೆ ಮಾಡುವುದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ. ಸಾಕಿಸಲಹಿದ ಪಾಲಕರ ತ್ಯಾಗವನ್ನು ಮಕ್ಕಳು ಯಾವತ್ತೂ ನೆನಪಿನಲ್ಲಿಟ್ಟುಕೊಳ್ಳಬೇಕು. ಅವರನ್ನು ವೃದ್ಧಾಪ್ಯದಲ್ಲಿ ಸಂತೃಪ್ತಿಯಿಂದ ನೋಡಿಕೊಳ್ಳಬೇಕು ಎಂದರು.

ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯೆ ಹಾಗೂ ಪ್ರೌಢ ವಿಭಾಗದ ಮೇಲ್ವಿಚಾರಕಿ ಪುಲಸ್ತ್ಯಾ ರೈ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳು ಪಾಲಕರ ಪಾದವನ್ನು ತೊಳೆದು ಅರಶಿಣ ಕುಂಕುಮ ಹಚ್ಚಿ ಪುಷ್ಪಾರ್ಚನೆ ಮಾಡಿ ಆರತಿ ಬೆಳಗಿ ಪ್ರತ್ಯಕ್ಷ ದೇವರುಗಳನ್ನು ಪೂಜಿಸುವುದರ ಮೂಲಕ ವೇದಿಕೆ ಭಾವನಾತ್ಮಕ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು. ಪಾಲಕರು ತಮ್ಮ ಮನದಾಳದ ಭಾವನೆಗಳನ್ನು ಅನಿಸಿಕೆಯ ಮೂಲಕ ಅಭಿವ್ಯಕ್ತಗೊಳಿಸಿದರು. ಸಂಸ್ಥೆಯ ಆಡಳಿತ ಮಂಡಳಿಯ ಕೋಶಾಧಿಕಾರಿ ಲಿಂಗಪ್ಪ ಜೆ., ಮುಖ್ಯಶಿಕ್ಷಕಿ ಶೈಲಶ್ರೀ ರೈ ಎಸ್., ಆಡಳಿತ ಮಂಡಳಿ ಸದಸ್ಯ ಶಿವಪ್ರಸಾದ್ ಮೈಲೇರಿ, ಶೈಲಶ್ರೀ ರೈ ಎಸ್.ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಲಕ್ಷ್ಮೀಶ ಗೌಡ ಆರಿಗ ವಂದಿಸಿದರು. ಶಿಕ್ಷಕಿ ಸೌಮ್ಯ ಕೆ.ಎ.ನಿರೂಪಿಸಿದರು.