ಜಿಲ್ಲೆ

ಮಗಳು ಲವ್ ಮಾಡಿದ್ದಕ್ಕೆ ಮರ್ಯಾದೆಗೆ ಅಂಜಿ ಆಕೆ ಜೀವವನ್ನೇ ತೆಗೆದ ತಂದೆ..Bidar

ಬೀದರ್: ( Bidar ) ಮಗಳು ಲವ್ ಮಾಡಿದ್ದಕ್ಕೆ ಮರ್ಯಾದೆಗೆ ಅಂಜಿ ಆಕೆಯ ಜೀವವನ್ನೇ ಪಾಪಿ ತಂದೆಯೊಬ್ಬ ತೆಗೆದಿದ್ದಾನೆ. ಜಿಲ್ಲೆಯ ಔರಾದ್ ತಾಲೂಕಿನ ಬರಗೇನ್ ತಾಂಡಾದಲ್ಲಿ ಕೃತ್ಯ ನಡೆದಿದೆ.

ಮೋನಿಕಾ ಮೋತಿರಾಮ ಜಾಧವ್ (18) ಕೊಲೆಯಾದ ದುರ್ದೈವಿ. ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದು ತಂದೆಯೇ ದೊಣ್ಣೆಯಿಂದ ಹೊಡೆದು ಮಗಳನ್ನೇ ಬರ್ಬರ ಹತ್ಯೆ ಮಾಡಿ  ಪರಾರಿಯಾಗಿದ್ದಾನೆ.

ನಡೆದಿದ್ದೇನು?: 

ಪ್ರೀತಿ-ಪ್ರೇಮದಿಂದ ದೂರವಿರುವಂತೆ ಮಗಳಿಗೆ ತಂದೆ ತಿಳುವಳಿಕೆ ಹೇಳಿದ್ದಾನೆ. ಅಲ್ಲದೇ ನಿನಗೆ ಒಳ್ಳೆಯ ಹುಡುಗನನ್ನ ನೋಡಿ ಮದುವೆ ಮಾಡುತ್ತೇನೆ ಎಂದಿದ್ದಾನೆ. ಈ ವೇಳೆ ತಂದೆಯ ಎದುರು ಮಗಳು ಪ್ರೀತಿ ವಿಷಯ ಪ್ರಸ್ತಾಪಿಸಿದ್ದಲ್ಲದೇ ಅವನನ್ನೇ ಮದುವೆ ಆಗುತ್ತೇನೆ ಎಂದು ಗಲಾಟೆ ಮಾಡಿದ್ದಾಳೆ.

ಬುದ್ಧಿಮಾತು ಹೇಳಿದ್ರೂ ಕೇಳದ ಹಿನ್ನೆಲೆ ಕೋಪಗೊಂಡು ತಂದೆ ಮಗಳನ್ನು  ಹೊಡೆದಿದ್ದಾನೆ.ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಗಳ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೊನಿಕಾ ಮೃತಪಟ್ಟಿದ್ದಾರೆ. ಮಗಳನ್ನೇ ಬರ್ಬರ ಹತ್ಯೆ ಮಾಡಿ  ಪರಾರಿಯಾಗಿದ್ದಾನೆ.

ಈ ಕುರಿತು ಸಂತಪೂರ ಪೊಲೀಸ್ ಠಾಣೆಯಲ್ಲಿ ಮೃತ ಯುವತಿಯ ತಾಯಿ ಭಾಗುಬಾಯಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಬಲೆ ಬಿಸಿದ್ದಾರೆ.