ಸಿರವಾರ: ತಾಲೂಕಿನಲ್ಲಿ ಕಳೆದೊಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ.
ಮಳೆಗಾಲ ಆರಂಭದಲ್ಲಿ ಉತ್ತಮ ಮಳೆ ಬೀಳುತ್ತಿದೆ. ಅಲ್ಲದೆ ಹವಾಮಾನ ಇಲಾಖೆ ಪ್ರತಿ ವರ್ಷಕ್ಕಿಂತ ಈ ಸಲ ಉತ್ತಮ ಮಳೆಯಾಗಲಿದೆ ಎಂದು ಹೇಳಿರುವುದರಿಂದ ರೈತರಲ್ಲಿ ಮಂದಹಾಸ ಮೂಡಿದೆ.
ಈಗಾಗಲೇ ಜಮೀನು ಸ್ವಚ್ಛತಾ ಕಾರ್ಯ ನಡೆದಿದ್ದು, ಹತ್ತಿ, ಮೆಣಸಿನಕಾಯಿ ಸೇರಿದಂತೆ ಇತರ ಬೀಜಗಳು ಬಿತ್ತನೆ ಮಾಡುತ್ತಿದ್ದಾರೆ. ತುಂಗಭದ್ರಾ ಜಲಾಶಯದಲ್ಲಿ ಒಳ ಹರಿವು ಹೆಚ್ಚಾದ ಕಾರಣ ಭತ್ತ ನಾಟಿ ಮಾಡುವ ರೈತರ ಮೊಗದಲ್ಲಿ ಸಂತಸ ಮೂಡಿದೆ.