ಮೈಸೂರು: ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಟ್ಟದ ಕತ್ತಿವರಸೆ ಪಂದ್ಯಾವಳಿಯಲ್ಲಿ ಮೈಸೂರು ವಿಶ್ವವಿದ್ಯಾಲಯದ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡುವ ಮೂಲಕ ಕಂಚಿನ ಪದಕ ಗಳಿಸಿದ್ದಾರೆ.
ಪಂಜಾಬ್‌ನ ಅಮೃತಸರ ಗುರುನಾನಕ್ ದೇವ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಪಂದ್ಯಾವಳಿಯಲ್ಲಿ ಮೈಸೂರು ವಿವಿಯ ಕುದೇರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕೆ.ಆರ್.ಸಚಿನ್ ಕಂಚಿನ ಪದಕ ಪಡೆದು ಗಮನ ಸೆಳೆದಿದ್ದಾರೆ.
ಒಂದು ವಾರಗಳ ಕಾಲ ನಡೆದ ಸದರಿ ಪಂದ್ಯಾವಳಿಯಲ್ಲಿ ಮೈಸೂರು ವಿವಿಯ ಕುದೇರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗಜೇಂದ್ರ, ಯುವರಾಜ, ಸಚಿನ್, ಕೆ.ವಿ.ದರ್ಶನ್ ಭಾಗವಹಿಸಿ ಗಮನಾರ್ಹ ಸಾಧನೆ ಮಾಡುವ ಮೂಲಕ ಏಪ್ರಿಲ್ ತಿಂಗಳಿನಲ್ಲಿ ನಡೆಯುವ ಅಂತರ ವಿಶ್ವವಿದ್ಯಾಲಯ ಖೇಲೋ ಇಂಡಿಯಾ ಕ್ರೀಡಾ ಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ ಎಂದು ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಪಿ. ಕೃಷ್ಣಯ್ಯ ತಿಳಿಸಿದ್ದಾರೆ.