ಜಿಲ್ಲೆ

ಸಿಎಂ ಕಾರ್ಯಕ್ರಮಕ್ಕೆ ಫೆಂಗಲ್ ಭೀತಿ!

ಜಗನ್ನಾಥ್ ಕಾಳೇನಹಳ್ಳಿ

ತುಮಕೂರು: ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ , ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖಾ ಯೋಜನೆಗಳ ಫಲಾನುಭವಿಗಳ ಸವಲತ್ತು ವಿತರಣಾ ಕಾರ್ಯಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಡಿ.2ರಂದು ಚಾಲನೆ ನೀಡುವರು. ವಿಪಕ್ಷ ಶಾಸಕರ ಕಪ್ಪುಪಟ್ಟಿ ಪ್ರದರ್ಶನ "ಗುಮ್ಮ'ದ ನಡುವೆ ಜಿಲ್ಲಾಡಳಿತಕ್ಕೆ 'ಫೆಂಗಲ್​' ಚಂಡಮಾರುತ ತಲೆಬಿಸಿ ಕಾಡಲಾರಂಭಿಸಿದೆ. ಜಿಲ್ಲಾ ಉಸ್ತುವಾರಿ ಸಚಿವರು ಆದ ಗೃಹ ಸಚಿವರ ತವರು ಜಿಲ್ಲೆಯಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದ ವೇಳೆ ಸಣ್ಣ ಲೋಪವು ಎದುರಾಗದಂತೆ ಪೊಲೀಸ್​ ಬಂದೋಬಸ್ತ್​ ಬಿಗಿಗೊಳಿಸಲಾಗಿದೆ.

ನಗರದ ಸರ್ಕಾರಿ ಜೂನಿಯರ್​ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಪಂ ವತಿಯಿಂದ ಆಯೋಜಿಸಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ , ಶಂಕುಸ್ಥಾಪನೆ ಹಾಗೂ ಸವಲತ್ತು ವಿತರಣಾ ಕಾರ್ಯಕ್ರಮವನ್ನು ಸೋಮವಾರ ಮಧ್ಯಾಹ್ನ 12ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡುವರು. ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶುಪಾಲನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣ ಕೈಗಾರಿಕೆ, ಕಾರ್ಮಿಕ, ರೇಷ್ಮೆ, ಕಂದಾಯ, ವಿಕಲ ಚೇತನರ ಕಲ್ಯಾಣ, ಮಹಾನಗರಪಾಲಿಕೆ, ಹಾಲು ಒಕ್ಕೂಟ, ವಿವಿಧ ನಿಗಮಗಳು, ಎನ್​ಆರ್​ಎಲ್​ಎಂ ಸೇರಿದಂತೆ ವಿವಿಧ ಇಲಾಖೆಗಳು ಅನುಷ್ಠಾನಗೊಳಿಸುವ ಯೋಜನೆಗಳಡಿ ಗುರುತಿಸಲಾಗಿರುವ 1.46 ಲಕ್ಷ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆತರಲಾಗುತ್ತಿದೆ.

ಇದಕ್ಕು ಮುನ್ನ ಬೆಳ್ಳಾವಿ ಹೋಬಳಿ ಪಿ.ಗೊಲ್ಲಹಳ್ಳಿಗೆ ಹೆಲಿಕ್ಯಾಪ್ಟರ್​ನಲ್ಲಿ ಬಂದಿಳಿಯುವ ಸಿಎಂ ಸಿದ್ದರಾಮಯ್ಯ ಅಂತಾರಾಷ್ಟ್ರೀಯ ಕ್ರಿಕೆಟ್​ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ, ಸಹಕಾರ ಸಚಿವ ಕೆ.ಎನ್​.ರಾಜಣ್ಣ, ಬಿಸಿಸಿಐ ಅಧ್ಯಕ್ಷ ರೋಜರ್​ ಬಿನ್ನಿ, ಕೆಎಸ್​ಸಿಎ ಅಧ್ಯಕ್ಷ ಎ.ರುರಾಮಭಟ್​ ಉಪಸ್ಥಿತರಿರುವರು. ಅಲ್ಲಿಂದ ಸರ್ಕಾರಿ ಜೂನಿಯರ್​ ಕಾಲೇಜು ಮೈದಾನಕ್ಕೆ ರಸ್ತೆ ಮಾರ್ಗದಲ್ಲಿ ತಲುಪಲಿರುವ ಸಿದ್ದರಾಮಯ್ಯ ಸವಲತ್ತು ವಿತರಣೆ ಕಾರ್ಯಕ್ರಮ ಉದ್ಘಾಟಿಸಿ, ಲಾನುಭವಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್​, ಗೃಹ ಸಚಿವ ಡಾ.ಜಿ.ಪರಮೇಶ್ವರ್​, ಸಹಕಾರ ಸಚಿವ ಕೆ.ಎನ್​.ರಾಜಣ್ಣ, ಇಂಧನ ಸಚಿವ ಕೆ.ಜೆ. ಜಾರ್ಜ್​, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್​.ಸಿ. ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ, ಕಂದಾಯ ಸಚಿವ ಕೃಷ್ಣಬೈರೇಗೌಡ , ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಸಚಿವ ಪ್ರಿಯಾಂಕ್​ ರ್ಖಗೆ, ಕೃಷಿ ಸಚಿವ ಚಲುವರಾಯಸ್ವಾಮಿ, ವಸತಿ ಸಚಿವ ಜಮೀರ್​ ಅಹ್ಮದ್​ ಖಾನ್​ ಸೇರಿಂದ ಅರ್ಧಸಂಪುಟ ಸಭೆಯಲ್ಲಿ ಹಾಜರಿರುವ ನಿರೀೆ ಇದೆ. ಶಾಸಕ ಜಿ.ಬಿ. ಜ್ಯೋತಿಗಣೇಶ್​ ಅಧ್ಯಕ್ಷತೆ ವಹಿಸಲಿದ್ದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣರನ್ನು ಸಹ ಆಹ್ವಾನಿಸಲಾಗಿದೆ.

ಜರ್ಮನ್​ ಟೆಂಟ್​ : ವೇದಿಕೆ ಸೇರಿದಂತೆ ಲಾನುಭವಿಗಳು ಕುಳಿತುಕೊಳ್ಳಲು ಬೃಹತ್​ ಜರ್ಮನ್​ ಟೆಂಟ್​ ನಿರ್ಮಿಸಲಾಗಿದೆ. ಹಾಗಾಗಿ, ೆಂಗಲ್​ ಚಂಡಮಾರುತದ ನಡುವೆಯೂ ಕಾರ್ಯಕ್ರಮ ಯಶಸ್ಸಿಗೆ ಸಕಲ ಸಿದ್ಧತೆ ಮಾಡಿಕೊಂಡಿರುವ ಜಿಲ್ಲಾಡಳಿತಕ್ಕೆ ಲಾನುಭವಿಗಳನ್ನು ಮಳೆ, ಚಳಿಯಿಂದ ಸುರತವಾಗಿ ಕಾಪಾಡುವ ಸವಾಲಿದೆ. ಭಾನುವಾರ ಸಂಜೆ ಕೂಡ ಸಮಾರೋಪಾದಿಯಲ್ಲಿ ಸಿದ್ಧತೆ ನಡೆಯುತ್ತಿದ್ದು ಸಚಿವ ಪರಮೇಶ್ವರ್​ ಜಿಲ್ಲಾಡಳಿತದೊಂದಿಗೆ ಪರಿಶೀಲಿಸಿ, ಮಾರ್ಗದರ್ಶನ ನೀಡಿದರು.