ಹುಬ್ಬಳ್ಳಿ : ಹುಬ್ಬಳ್ಳಿಯ ಈದ್ಗಾ ಮೈದಾನ ಸಾರ್ವಜನಿಕ ಆಸ್ತಿ. ಈ ಬಾರಿಯೂ ಅಲ್ಲಿ ಯಾವುದೇ ಗೊಂದಲ ಇಲ್ಲದೇ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮಾಜದವರಿಗೆ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಲಾಗುತ್ತದೆ. ಅದರಂತೆ ಕಳೆದ ಬಾರಿಯಂತೆ ಈ ಬಾರಿಯೂ ಗಣೇಶೋತ್ಸವಕ್ಕೆ ಅವಕಾಶ ಕೊಡಬೇಕು. ಸರ್ಕಾರ ಯಾವುದೇ ರೀತಿಯ ಅನಗತ್ಯ ವಿವಾದವನ್ನು ಮೈಮೇಲೆ ಎಳೆದುಕೊಳ್ಳಬಾರದು ಎಂದರು.
ಡಿಜೆ ಸೇರಿದಂತೆ ಯಾವುದೇ ರೀತಿಯ ನಿರ್ಬಂಧವನ್ನು ಹೇರಬಾರದು. ಶಾಂತಿಯಿಂದ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕು ಎಂದು ಹೇಳಿದರು.