ಬಾಗಲಕೋಟೆ ನಗರದ ಜಿಲ್ಲಾಡಳಿತ ಭವನದಲ್ಲಿ ಪಿಂಜಾರ, ನದಾಫ್ ಅಭಿವೃದ್ಧಿ ನಿಗಮಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ಪಿಂಜಾರ-ನದ್ಾ ಸಂಘದ ಜಿಲ್ಲಾಧ್ಯಕ್ಷ ಸೈದುಸಾಬ ಹೊಸಮನಿ, ರಾಜ್ಯ ಸಂಘದ ಸಂಘಟನಾ ಕಾರ್ಯದರ್ಶಿ ಎಸ್.ಎಚ್. ಮುದಕವಿ, ವಿಭಾಗೀಯ ಉಪಾಧ್ಯಕ್ಷ ಪಿ. ಇಮಾಮಸಾಬ, ಎಂ.ವೈ. ನದಾಫ್, ಕಾದರಸಾಬ ಹುಬ್ಬಳ್ಳಿ ಇತರರಿದ್ದರು. 
ಜಿಲ್ಲೆ

ಅನುದಾನ ಬಿಡುಗಡೆಗೆ ಉಗ್ರ ಹೋರಾಟ

ದತ್ತಾತ್ರೇಯ ಪಿ ಕುಲಕರ್ಣಿ

ಬಾಗಲಕೋಟೆ: ಪಿಂಜಾರ, ನದಾಫ್ ಅಭಿವೃದ್ಧಿ ನಿಗಮಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಜಿಲ್ಲಾಡಳಿತ ಭವನದ ಎದುರು ಬುಧವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ ಮೂಲಕ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ಪಿಂಜಾರ-ನದಾಫ್ ಸಂಘದ ಜಿಲ್ಲಾಧ್ಯಕ್ಷ ಸೈದುಸಾಬ ಹೊಸಮನಿ ಮಾತನಾಡಿ, ರಾಜ್ಯದಲ್ಲಿ 20 ಲಕ್ಷಕ್ಕೂ ಹೆಚ್ಚು ಪಿಂಜಾರ, ನದಾಫ್ ಸಮುದಾಯದ ಜನಸಂಖ್ಯೆ ಇದೆ. ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಔದ್ಯೋಗಿಕ, ರಾಜಕೀಯ ಹಾಗೂ ಹಲವಾರು ರಂಗಗಳಲ್ಲಿ ಅತ್ಯಂತ ಹಿಂದುಳಿದ ಶೋಷಿತ ಸಮಾಜವಾಗಿದೆ. ಈ ಜನಾಂಗವು ಇಸ್ಲಾಂ ಧರ್ಮದ ಮುಸ್ಲಿಂ(ಅಲ್ಪಸಂಖ್ಯಾತರ) ಪಂಗಡದಲ್ಲಿದ್ದು, ಹಿಂದುಳಿದ ವರ್ಗಗಳ ಇಲಾಖೆಗೆ ಸಂಬಂಧಿಸಿದ ನದಾಫ್ /ಪಿಂಜಾರ ಉಪಜಾತಿಯ ಪ್ರವರ್ಗ -1ರ ಮೀಸಲಾತಿ ಹೊಂದಿದೆ. ಇಲ್ಲಿವರೆಗೂ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಮತ್ತು ಇತರ ಯೋಜನೆಗಳಿಂದ ಸೌಲಭ್ಯ ಪಡೆದುಕೊಳ್ಳಲು ನಿರ್ದೇಶನ ಇದ್ದರೂ, ತಾಂತ್ರಿಕ ದೋಷಗಳಿಂದ ಹಾಗೂ ಅಧಿಕಾರಿಗಳ ನಿರ್ಲಕ್ಷತೆಯಿಂದ ಯಾವುದೇ ಯೋಜನೆಗಳು ಸರಿಯಾಗಿ ತಲುಪದೆ ವಂಚಿತರಾಗಿದ್ದೇವೆ ಎಂದು ತಿಳಿಸಿದರು.

ಹಲವಾರು ವರ್ಷಗಳ ಹೋರಾಟದ ಫಲವಾಗಿ ಈ ಹಿಂದಿನ ಸರ್ಕಾರ ಪ್ರತ್ಯೇಕವಾಗಿ ಪಿಂಜಾರ/ನದ್ಾ ಅಭಿವೃದ್ಧಿ ನಿಗಮದ ಆದೇಶ ಮಾಡಿ ಘೋಷಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವ ಸರ್ಕಾರ ನಿಗಮಕ್ಕೆ ಅನುದಾನ ನೀಡುತ್ತಿಲ್ಲ. ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ. ಸರ್ಕಾರ ಶೀಘ್ರ ನದಾಫ್/ಪಿಂಜಾರ ಅಭಿವೃದ್ಧಿ ನಿಗಮಕ್ಕೆ ಅನುದಾನ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದೆಂದು ಹೇಳಿದರು.

ರಾಜ್ಯ ಸಂಘದ ಸಂಘಟನಾ ಕಾರ್ಯದರ್ಶಿ ಎಸ್.ಎಚ್. ಮುದಕವಿ, ವಿಭಾಗೀಯ ಉಪಾಧ್ಯಕ್ಷ ಪಿ. ಇಮಾಮಸಾಬ, ಎಂ.ವೈ.ನದಾಫ್, ಕಾದರಸಾಬ ಹುಬ್ಬಳ್ಳಿ, ಅಮೀನಸಾಬ ನದಾಫ್, ಬಿ.ಎಂ. ಚಿತ್ತರಗಿ, ಬಾಬುಸಾಬ, ಎ್.ಎ. ಮುಲ್ಲಾ, ಯಾಸೀನ ನದಾಫ್, ಎ.ಎ. ಮುಲ್ಲಾ, ಅಯ್ಯುಬ್ ಕರಜಗಿ, ವಾಸೀಮ್ ನದಾಫ್, ರಿಯಾನಾಬಾನು ನದಾಫ್, ಮಹೀರುನ್ನಿಸಾ ಕೊತಬಾಳ, ಜನ್ನತ ನದಾಫ್, ವಾಸೀಂ ನದಾಫ್ ಇದ್ದರು.