filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 3145728;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 35; 
ಜಿಲ್ಲೆ

ಶಾಸಕರು ಕ್ಷಮೆಯಾಚಿಸದಿದ್ದರೆ ಉಗ್ರ ಹೋರಾಟ

Mysuru - Desk - Ravikumar

ಮಳವಳ್ಳಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ಕಾರ್ಯಕರ್ತರು ಮತ್ತು ರಾಜ್ಯಪಾಲರ ಬಗ್ಗೆ ಹಗುವಾಗಿ ಮಾತನಾಡಿರುವ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಕೂಡಲೇ ಕ್ಷಮೆಯಾಚಿಸದಿದ್ದರೆ ಅವರ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಎಚ್ಚರಿಕೆ ನೀಡಿದರು.

ಶಾಸಕ ನರೇಂದ್ರಸ್ವಾಮಿ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವ ಸಂಬಂಧ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಕರೆಯಲಾಗಿದ್ದ ಜೆಡಿಎಸ್ ಕಾರ್ಯಕರ್ತ ಮುಖಂಡರ ಸಭೆಯಲ್ಲಿ ಮುಖಂಡರ ಸಲಹೆ ಸೂಚನೆಗಳನ್ನು ಆಲಿಸಿ ಚರ್ಚಿಸಿದ ನಂತರ ಮಾತನಾಡಿದರು.

ಪಟ್ಟಣದಲ್ಲಿ ರಾಜ್ಯಪಾಲರ ವಿರುದ್ಧ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯ ವೇಳೆ ಎಚ್‌ಡಿಕೆ ಮತ್ತು ಜೆಡಿಎಸ್ ಪಕ್ಷದ ಹಾಗೂ ರಾಜ್ಯಪಾಲರ ಬಗ್ಗೆ ಅವಾಚ್ಯ ಪದ ಬಳಸಿ ಮಾತನಾಡಿದ್ದಾರೆ. ಶಾಸಕರ ವರ್ತನೆಯನ್ನು ಖಂಡಿಸಿ ತಕ್ಕ ಉತ್ತರ ಕೊಡಲು ಆ.24ರಂದು ಪಟ್ಟಣದಲ್ಲಿ ಸಹಸ್ರ ಸಂಖ್ಯೆಯ ಕಾರ್ಯಕರ್ತರ ಜತೆಗೂಡಿ ಪ್ರತಿಭಟನೆ ನಡೆಸುವುದರ ಜತೆಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗುವುದು ಎಂದರು.
ಒಬ್ಬ ದಲಿತ ರಾಜ್ಯಪಾಲರನ್ನು ಏಕವಚನದಲ್ಲಿ ನಿಂದಿಸಿರುವುದಲ್ಲದೆ, ಈ ಪ್ರಕರಣಕ್ಕೆ ಸಂಬಂಧವೇ ಇಲ್ಲದ ನಮ್ಮ ನಾಯಕ ಎಚ್‌ಡಿಕೆ. ಅವರನ್ನು ಕೀಳು ಪದಗಳನ್ನು ಬಳಸಿ ಟೀಕಿಸಿರುವುದು ಅವರ ದುರ್ನಡತೆಯನ್ನು ತೋರಿಸುತ್ತದೆ. ಕೂಡಲೇ ಅವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸದಿದ್ದರೆ ದುರಹಂಕಾರಿ ಶಾಸಕರ ವಿರುದ್ಧ ನಿರಂತರವಾಗಿ ಉಗ್ರ ಹೋರಾಟ ಮಾಡಲು ನಿರ್ದರಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜೆಡಿಎಸ್ ಪಕ್ಷದ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಡಿ.ಜಯರಾಮು, ಜಿಲ್ಲಾ ಉಪಾಧ್ಯಕ್ಷ ಸಿದ್ದಾಚಾರಿ, ತಾಲೂಕು ಯುವ ಘಟಕದ ಅಧ್ಯಕ್ಷ ಚಂದಳ್ಳಿ ಶ್ರೀಧರ್, ಟೌನ್ ಅಧ್ಯಕ್ಷ ಪ್ರಭು, ಎಸ್ಸಿ-ಎಸ್ಟಿ ಅಧ್ಯಕ್ಷ ಬೆಳಕವಾಡಿ ಕಾಂತರಾಜು, ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಉಮಾ, ಕಾರ್ಯಾಧ್ಯಕ್ಷೆ ಅನಿತಾ, ಪುರಸಭೆ ಸದಸ್ಯರಾದ ಟಿ.ನಂದಕುಮಾರ್, ಪ್ರಶಾಂತ, ಸಿದ್ದರಾಜು, ಜಿಪಂ ಮಾಜಿ ಸದಸ್ಯ ಹನಮಂತು, ಮುಖಂಡರಾದ ಯತ್ತಂಬಾಡಿ ಪುಟ್ಟರಾಮು, ಬುಲೆಟ್ ನಿಂಗಣ್ಣ, ದೊಡ್ಡಯ್ಯ ಸೇರಿದಂತೆ ಇತರರು ಹಾಜರಿದ್ದರು.