ಜಿಲ್ಲೆ

ಅರಣ್ಯ ಪಾಲಕನಿಗೆ ಧನ ಸಹಾಯ

ಎಚ್.ಡಿ.ಕೋಟೆ: ಕರಡಿ ದಾಳಿಯಿಂದ ಗಾಯಗೊಂಡಿದ್ದ ಅರಣ್ಯ ಪಾಲಕನ ನಿವಾಸಕ್ಕೆ ಇತ್ತೀಚೆಗೆ ಅಧಿಕಾರಿಗಳು ಭೇಟಿ ನೀಡಿ ಧನ ಸಹಾಯ ಮಾಡಿದ್ದಾರೆ. ಜೂನ್ ತಿಂಗಳಲ್ಲಿ ಮಂಚೇಗೌಡನಹಳ್ಳಿ ಹಾಡಿಯ ಮಾದ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ದಮ್ಮನಕಟ್ಟೆ ಅರಣ್ಯ ವ್ಯಾಪ್ತಿಯಲ್ಲಿ ನಾಲ್ವರು ಅರಣ್ಯ ಇಲಾಖೆ ಸಿಬ್ಬಂದಿ ಜತೆ ಗಸ್ತಿನಲ್ಲಿದ್ದರು. ಈ ವೇಳೆ ಮಾದನ ಮೇಲೆ ಕರಡಿ ದಾಳಿ ಮಾಡಿತ್ತು. ಇದರಿಂದ ತಲೆ, ಮುಖಕ್ಕೆ ಗಂಭೀರ ಗಾಯವಾಗಿತ್ತು. ಗಸ್ತಿನಲ್ಲಿ ಅರಣ್ಯ ಸಿಬ್ಬಂದಿ ಕರಡಿಯಿಂದ ಮಾದನನ್ನು ರಕ್ಷಿಸಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಚಿಕಿತ್ಸೆ ನಂತರ ಸಂಪೂರ್ಣ ಚೇತರಿಸಿಕೊಂಡಿರುವ ಮಾದನ ಆರೋಗ್ಯ ವಿಚಾರಿಸಿದ ಅರಣ್ಯ ಅಧಿಕಾರಿಗಳ ತಂಡ ಧನ ಸಹಾಯ ಕೂಡ ಮಾಡಿದ್ದಾರೆ. ಈ ವೇಳೆ ಎಸಿಎಫ್ ಮಧು, ಆರ್‌ಎಫ್‌ಒ ಸಿದ್ದರಾಜು ಇತರರು ಇದ್ದರು.