ಮಂಗಳೂರು:ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯ ಕೆನ್ನೆಗೆ ಹೊಡೆಯಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ ಮಂಗಳೂರು ಉತ್ತರ ಕ್ಷೇತ್ರ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ವಿರುದ್ಧ ಕಾವೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬಂಟ್ವಾಳ ಯುವ ಕಾಂಗ್ರೆಸ್ ವತಿಯಿಂದ ಬಂಟ್ವಾಳ ನಗರ ಪೊಲೀಸ್ ಠಾಣಾಧಿಕಾರಿಗೆ ದೂರು ನೀಡಲಾಗಿದೆ.
ಕೇಂದ್ರ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಿಂದು ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಕಾವೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಸಂದರ್ಭ ಭರತ್ ಶೆಟ್ಟಿ ವಿವಾದಾತ್ಮಕ ಮಾತುಗಳನ್ನಾಡಿದ್ದರು. ಈ ಬಗ್ಗೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ತಾಕತ್ತಿದ್ದರೆ ನಮ್ಮ ಒಬ್ಬ ಕಾರ್ಯಕರ್ತನಿಗೆ ಹೊಡೆದು ನೋಡಲಿ ಎಂದಿದ್ದಲ್ಲದೆ, ಪೊಲೀಸರು ಸುಮೊಟೋ ಕೇಸು ದಾಖಲಿಸಬೇಕೆಂದು ಆಗ್ರಹಿಸಿದ್ದರು. ಮನಪಾ ಸದಸ್ಯ ಅನಿಲ್ ಕುಮಾರ್ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಬಿಎನ್‌ಎಸ್ 353 ಮತ್ತಿತರ ಸೆಕ್ಷನ್ ಪ್ರಕಾರ ಕೇಸು ದಾಖಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.