ಕಲಬುರಗಿ: ಬ್ಯಾಂಕ್ವೊಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿ ಅಲ್ಲಿನ ಕೋಣೆಯೊಂದು ಹೊತ್ತಿ ಉರಿದಿದ್ದು, ಬೆಂಕಿಯನ್ನು ಆರಿಸಲು ಬಂದ ಅಗ್ನಿಶಾಮಕ ಸಿಬ್ಬಂದಿಯೊಬ್ಬರು ರಕ್ತದೊತ್ತಡ ತಗ್ಗಿ ಅಸ್ವಸ್ಥಗೊಂಡು ಕುಸಿದು ಬಿದ್ದ ಪ್ರಕರಣ ನಡೆದಿದೆ.
ಕಲಬುರಗಿಯ ಸೂಪರ್ ಮಾರ್ಕೆಟ್ನಲ್ಲಿರುವ ಕೆನರಾ ಬ್ಯಾಂಕ್ನಲ್ಲಿ ಈ ಅಗ್ನಿ ಅವಘಡ ನಡೆದಿದೆ. ಬ್ಯಾಂಕ್ನ ಹಿಂಭಾಗದಲ್ಲಿನ ಕೋಣೆಯಲ್ಲಿದ್ದ ಜನರೇಟರ್ ಬ್ಲಾಸ್ಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಸಂಜೆ ಏಳು ಗಂಟೆ ಸುಮಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಉರಿಯಲಾರಂಭಿಸಿದ್ದು, ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದರು.
ಇದನ್ನೂ ಓದಿ: ಗಂಡ-ಹೆಂಡತಿ ಜಗಳದ ದುರ್ಲಾಭ ಪಡೆಯಲು ಯತ್ನಿಸಿದ ಪೊಲೀಸ್; ಇನ್ಸ್ಪೆಕ್ಟರ್-ಎಎಸ್ಐ ವಿರುದ್ಧ ದಾಖಲಾಯಿತು ಎಫ್ಐಆರ್
ಅಗ್ನಿಶಾಮಕ ದಳದವರು ಬೆಂಕಿ ಆರಿಸಲು ಕಾರ್ಯಾಚರಣೆ ನಡೆಸುತ್ತಿದ್ದಾಗ ಅವರಲ್ಲಿ ಒಬ್ಬ ಸಿಬ್ಬಂದಿಯ ರಕ್ತದೊತ್ತಡ ತಗ್ಗಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಕಲಬುರಗಿಯ ಜಯದೇವ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ.