ಹನೂರು ಭಫರ್ ವಲಯದ ಎಬಿಆರ್ ಗುಡ್ಡದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಅಗ್ನಿಶಾಮಕ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಂದಿಸಿದರು. 
ಜಿಲ್ಲೆ

ಎಬಿಆರ್ ಗುಡ್ಡದಲ್ಲಿ ಬೆಂಕಿ

ನಾಗೇಶ ಎಸ್

ಹನೂರು: ಪಟ್ಟಣದಿಂದ ಅಜ್ಜೀಪುರಕ್ಕೆ ತೆರಳುವ ಮಾರ್ಗದಲ್ಲಿನ ಹನೂರು ಬಫರ್ ವಲಯಕ್ಕೆ ಸೇರಿದ ಎಬಿಆರ್ ಗುಡ್ಡದಲ್ಲಿ ಸೋಮವಾರ ಕಾಣಿಸಿಕೊಂಡ ಬೆಂಕಿಯನ್ನು ಅಗ್ನಿಶಾಮಕ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ನಂದಿಸಿದ್ದಾರೆ.

ಮಧ್ಯಾಹ್ನ 1 ಗಂಟೆ ಸುಮಾರಿಗೆ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಗಸ್ತಿನಲ್ಲಿದ್ದ ಸಿಬ್ಬಂದಿಗೆ ಈ ಬಗ್ಗೆ ತಿಳಿದಿದೆ. ಕೂಡಲೇ ಹಿರಿಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿ, ಬೆಂಕಿಯನ್ನು ನಂದಿಸಲು ಮುಂದಾಗಿದ್ದಾರೆ. ಆದರೆ ಜ್ವಾಲೆ ವ್ಯಾಪಿಸುವುದನ್ನು ಅರಿತ ಸಿಬ್ಬಂದಿ ರಾಜು, ಅಗ್ನಿಶಾಮಕ ಠಾಣೆಗೆ ಮಾಹಿತಿ ತಿಳಿಸಿದರು. ಸ್ಥಳಕ್ಕಾಗಮಿಸಿದ ಸಿಬ್ಬಂದಿ ಅರಣ್ಯ ಇಲಾಖೆ ಜತೆಗೂಡಿ ಸುಮಾರು 2 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವುದರ ಮೂಲಕ ಮುಂದಾಗುವ ಅನಾಹುತ ತಪ್ಪಿಸಿದ್ದಾರೆ. ಸದ್ಯ ನೆಲಮಟ್ಟದಲ್ಲಿ ಒಣಗಿದ ಸಸ್ಯಗಳು ಮಾತ್ರ ಬೆಂಕಿಗೆ ಆಹುತಿಯಾಗಿವೆ.

ಫೋಟೋ

10 ಹನೂರು 4 ಹನೂರು ಭಫರ್ ವಲಯದ ಎಬಿಆರ್ ಗುಡ್ಡದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಅಗ್ನಿಶಾಮಕ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಂದಿಸಿದರು.