ಜಿಲ್ಲೆ

ಐಎನ್‌ಎಸ್ ವಿಕ್ರಮಾದಿತ್ಯ ನೌಕೆಯಲ್ಲಿ ಬೆಂಕಿ

mcbhadrashetti

ಕಾರವಾರ: ಭಾರತೀಯ ನೌಕಾಸೇನೆಯ ಯುದ್ಧ ವಿಮಾನ ವಾಹಕ ನೌಕೆ ಐಎನ್‌ಎಸ್ ವಿಕ್ರಮಾದಿತ್ಯದಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಶನಿವಾರ ಬೆಳಗ್ಗೆ ಘಟನೆ ನಡೆದಿದ್ದು, ಸೇಲರ್​​ಗಳು ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ. ನೌಕೆಗೂ ಗಂಭೀರ ಹಾನಿ ಸಂಭವಿಸಿಲ್ಲ ಎಂದು ನೌಕಾಸೇನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಅಜಯ ಕಪೂರ್ 'ವಿಜಯವಾಣಿ'ಗೆ ತಿಳಿಸಿದ್ದಾರೆ.

ಎರಡನೇ ಬಾರಿ: ವಿಕ್ರಮಾದಿತ್ಯ ನೌಕೆಯಲ್ಲಿ ಅಗ್ನಿ ಅವಘಡ ಸಂಭವಿಸುತ್ತಿರುವುದು ಇದೇ ಮೊದಲಲ್ಲ. 2019 ರ ಏಪ್ರೀಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಆಗ ಒಬ್ಬ ಅಧಿಕಾರಿ ಮೃತಪಟ್ಟಿದ್ದರು.