ದೊಡ್ಡಬಳ್ಳಾಪುರ: ತಾಲೂಕಿನ ಹೊರವಲಯದ ಎಳ್ಳುಪುರ ರಸ್ತೆಯಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯ ತುಂಬಿದ್ದ ಕಾಟನ್ ಬಾಕ್ಸ್ ಗೋದಾಮಿಗೆ ಶುಕ್ರವಾರ ಆಕಸ್ಮಿಕ ಬೆಂಕಿ ತಗುಲಿದೆ. ಬೆಂಕಿಯ ಕೆನ್ನಾಲಿಗೆಗೆ ಕಾಟನ್ ಬಾಕ್ಸ್ ಗೋದಾಮಿನಲ್ಲಿದ್ದ ವಸ್ತುಗಳು ಸಂಪೂರ್ಣ ಸುಟ್ಟು ಬೂದಿಯಾಗಿವೆ. ಮಾಹಿತಿ ತಿಳಿದ ದೊಡ್ಡಬಳ್ಳಾಪುರದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.