ಮೂಗೂರಿನಲ್ಲಿ ಬೆಂಕಿ ತಗುಲಿ ಕಬ್ಬು ಬೆಳೆ ನಾಶವಾಗಿರುವುದು. 
ಜಿಲ್ಲೆ

ಮೂಗೂರಿನಲ್ಲಿ ಬೆಂಕಿ ತಗುಲಿ ಕಬ್ಬು ಬೆಳೆ ಭಸ್ಮ

ರವಿಕುಮಾರ್ ಪಿ. ಕೆ

ಮೂಗೂರು: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಬುಧವಾರ ಮಧ್ಯಾಹ್ನ ಕಟಾವಿಗೆ ಬಂದ ಕಬ್ಬಿನ ಬೆಳೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಬೆಳೆ ಸುಟ್ಟು ಭಸ್ಮವಾಗಿದೆ.

ಗ್ರಾಮದ ಉಮಾ ಸುರೇಶ್ ಎಂಬುವರಿಗೆ ಸೇರಿದ 2.06 ಎಕರೆ ಪ್ರದೇಶದಲ್ಲಿ ಬೆಳೆದ ಕಬ್ಬು ಬೆಂಕಿಗೆ ಆಹುತಿಯಾಗಿ ನಷ್ಟ ಸಂಭವಿಸಿದೆ ಬೆಂಕಿ ತಗುಲಿದ ಸುದ್ದಿ ತಿಳಿದ ತಿ.ನರಸೀಪುರ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಪರಿಹಾರ ಒದಗಿಸಬೇಕು ಎಂದು ನಷ್ಟಕ್ಕೆ ಒಳಗಾದ ಉಮಾ ಸುರೇಶ್ ಒತ್ತಾಯಿಸಿದ್ದಾರೆ.