ಆಕಸ್ಮಿಕ ಬೆಂಕಿ ತಗುಲಿ ಕಟಾವಿಗೆ ಬಂದಿದ್ದ ಎರಡು ಎಕರೆ ಕಬ್ಬು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಲಕ್ಷಾಂತರ ರೂ ಬೆಳೆ ನಷ್ಟವಾಗಿದೆ. 
ಜಿಲ್ಲೆ

ಬೆಂಕಿ ತಗುಲಿ ಎರಡು ಎಕರೆ ಕಬ್ಬು ನಾಶ

ನಾಗೇಶ ಎಸ್

ಕೆ.ಆರ್.ಪೇಟೆ: ಆಕಸ್ಮಿಕ ಬೆಂಕಿ ತಗುಲಿ ಕಟಾವಿಗೆ ಬಂದಿದ್ದ ಎರಡು ಎಕರೆ ಕಬ್ಬು ಶುಕ್ರವಾರ ಬೆಂಕಿಗಾಹುತಿಯಾಗಿದೆ.

ಹೊಸಹೊಳಲು ಗ್ರಾಮದ ಹರೀಶ್ ಅವರು ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿದೆ. ಕಬ್ಬಿನ ಫಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದರು. ಆದರೆ ಅಷ್ಟರಲ್ಲಿ ಕಬ್ಬು ಸಂಪೂರ್ಣ ಸುಟ್ಟು ಕರಕಲಾಗಿತ್ತು. ಕೈಗೆ ಬಂದಿದ್ದ ತುತ್ತು ಬಾಯಿಗೆ ಬಾರದಂತಾಗಿದೆ. ಘಟನೆಯಿಂದ ಲಕ್ಷಾಂತರ ರೂ. ನಷ್ಟವಾಗಿದ್ದು, ಸೂಕ್ತ ಪರಿಹಾರ ನೀಡಬೇಕು ಎಂದು ಸಂತ್ರಸ್ತ ಕುಟುಂಬ ತಾಲೂಕು ಆಡಳಿತಕ್ಕೆ ಮನವಿ ಮಾಡಿದೆ.