ಜಿಲ್ಲೆ

ಎಸ್​ವಿಸಿ ಕೋ-ಆಪರೇಟಿವ್​ ಬ್ಯಾಂಕ್​ ಕಚೇರಿಯಲ್ಲಿ ಬೆಂಕಿ; ಸರ್ವರ್​ ರೂಮ್​ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್​

rashmirhebbur

ತುಮಕೂರು: ನಗರದ ಎಂ.ಜಿ. ರಸ್ತೆಯಲ್ಲಿ ಇರುವ ಎಸ್​ವಿಸಿ ಕೋ-ಆಪರೇಟಿವ್ ಬ್ಯಾಂಕ್​ನಲ್ಲಿ ಇಂದು ಸಂಜೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು. ಬೆಂಕಿ ಆಕಸ್ಮಿಕದಿಂದಾಗಿ ಕಚೇರಿಯ ಪೀಠೋಪಕರಣ ಸೇರಿ ಹಲವಾರು ವಸ್ತುಗಳು ಸುಟ್ಟುಹೋಗಿವೆ.

ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ನಂದಿಸುವ ಕಾರ್ಯಾಚರಣೆ ನಡೆಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿಹೋಗಿದೆ. ಬೆಂಕಿ ಅವಘಡದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸರ್ವರ್ ರೂಮ್​ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದು, ಆ ಕೋಣೆಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಅಕ್ಕಪಕ್ಕದ ಅಂಗಡಿಯವರು ಮಾಹಿತಿ ನೀಡಿದ್ದು ಹೆಚ್ಚಿನ ಅನಾಹುತ ಆಗಿಲ್ಲ ಎಂದು ಬ್ಯಾಂಕ್​ನ ಮ್ಯಾನೇಜರ್ ಮಂಜುಶ್ರೀ ಅವರು ತಿಳಿಸಿದ್ದಾರೆ.