ಜಿಲ್ಲೆ

ಬೇಲದಕೆರೆ ಅರಣ್ಯಕ್ಕೆ ಬೆಂಕಿ

ಪ್ರಸಿನ್ ಕೆ.ಆರ್

ಹನೂರು: ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಪಚ್ಚೆದೊಡ್ಡಿ ಸಮೀಪದ ಬೇಲದಕೆರೆ ಅರಣ್ಯ ಪ್ರದೇಶದಲ್ಲಿ ಶನಿವಾರ ಸಂಜೆ ಬೆಂಕಿ ಕಾಣಿಸಿಕೊಂಡು ಸುಮಾರು 20ಕ್ಕೂ ಹೆಚ್ಚು ಪ್ರದೇಶ ಬೆಂಕಿಗೆ ಆಹುತಿಯಾಗಿದೆ.

ಸಂಜೆ 5ರ ವೇಳೆಯಲ್ಲಿ ಈ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬಗ್ಗೆ ತಿಳಿದ ಗಸ್ತಿನಲ್ಲಿದ್ದ ಸಿಬ್ಬಂದಿಗಳು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಅವರ ಮಾರ್ಗದರ್ಶನದಲ್ಲಿ ಬೆಂಕಿಯನ್ನು ನಂದಿಸಲು ಮುಂದಾಗಿದ್ದು, ಕೊನೆಗೂ ಯಶಸ್ವಿಯಾಗಿದ್ದಾರೆ. ಸುಮಾರು 20ಕ್ಕೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದ್ದು, ನೆಲಮಟ್ಟದಲ್ಲಿ ಒಣಗಿದ್ದ ಕುರುಚಲು ಸಸ್ಯಗಳು ನಾಶವಾಗಿದೆ. ಈ ಪ್ರದೇಶದಲ್ಲಿ ಆನೆ, ಜಿಂಕೆ ಹಾಗೂ ಕಾಡೆಮ್ಮೆಗಳು ಹೆಚ್ಚಾಗಿದ್ದು, ಸದ್ಯ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.