ಕಾರವಾರ: ಮನೆಯೊಂದಕ್ಕೆ ಬೆಂಕಿ ಬಿದ್ದು ಹೊತ್ತಿ ಉರಿದ ಘಟನೆ ತಾಲೂಕಿನ ನಂದನಗದ್ದಾದಲ್ಲಿ ಗುರುವಾರ ನಡೆದಿದೆ.
ನಂದನಗದ್ದಾದ ತೇಲಂಗ ರಸ್ತೆಯ ಅಜಯ ತಳೇಕರ್ ಅವರ ಅಡುಗೆ ಮನೆಯಲ್ಲಿ ಗುರುವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿತ್ತು. ನೋಡ, ನೋಡುತ್ತಿದ್ದಂತೆ ಇಡೀ ಮನೆಗೆ ಬೆಂಕಿ ವ್ಯಾಪಿಸಿತು.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿ ಬೇರೆಡೆ ಹರಡುವುದನ್ನು ತಪ್ಪಿಸಿದ್ದಾರೆ. ಆದರೂ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.