ಕಂಡಯ್ಯನಪಾಳ್ಯ ಸಮೀಪದ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡ ಬೆಂಕಿ. 
ಜಿಲ್ಲೆ

ಕಂಡಯ್ಯನಪಾಳ್ಯ ಅರಣ್ಯಕ್ಕೆ ಬೆಂಕಿ

ರವಿಕುಮಾರ್ ಪಿ. ಕೆ

ಹನೂರು: ತಾಲೂಕಿನ ಕಂಡಯ್ಯನಪಾಳ್ಯ ಹಾಗೂ ರಾಮಾಪುರ ಸಮೀಪದಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡು, ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ.

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯ ಪ್ರದೇಶಕ್ಕೆ ಸೇರಿದ ಕಂಡಯ್ಯನಪಾಳ್ಯ ಅರಣ್ಯ ಪ್ರದೇಶದಲ್ಲಿ ಮಧ್ಯಾಹ್ನ 1.30ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಈ ಬಗ್ಗೆ ತಿಳಿದು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು, ಒಣಗಿದ ನೆಲಮಟ್ಟದ ಕುರುಚಲು ಸಸ್ಯಗಳು ಬೆಂಕಿಗೆ ಆಹುತಿಯಾಗಿದೆ. ಇನ್ನು ಕಾವೇರಿ ವನ್ಯಜೀವಿ ವಲಯದ ರಾಮಾಪುರ ಸಮೀಪದ ಮಕರಿಕಲ್ಲು ಅರಣ್ಯ ಪ್ರದೇಶದಲ್ಲಿ ಸಂಜೆ ಕಾಣಿಸಿಕೊಂಡ ಬೆಂಕಿಯನ್ನು ಆರ್‌ಎಫ್‌ಓ ರಾಜಶೇಖರ್ ನೇತೃತ್ವದಲ್ಲಿ ಸಿಬ್ಬಂದಿ ತಂಡ ತಡರಾತ್ರಿವರೆಗೂ ಕಾರ್ಯಾಚರಣೆ ನಡೆಸಿ ನಂದಿಸಿದ್ದು, ಸುಮಾರು 4 ಎಕರೆ ಪ್ರದೇಶ ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದು ಬಂದಿದೆ.