ಮಾನ್ವಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಚಿವ ಎನ್.ಎಸ್. ಬೋಸರಾಜುಗೆ ವಜಾ ಗೊಂಡ ದಿನಗೂಲಿ ನೌಕರರು ಮನವಿ ಸಲ್ಲಿಸಿದರು. ಕರ್ನಾಟಕ ಜನ ಜಾಗೃತಿ ಸಮಿತಿ ತಾಲೂಕು ಅಧ್ಯಕ್ಷ ನಾಗರಾಜ, ಪ್ರಮುಖರಾದ ಮಾರೆಪ್ಪ, ರಮೇಶ, ಚಿನ್ನಪ್ಪ, ಹನುಮಂತ ಕಟ್ಟಿಮನಿ ಇತರರಿದ್ದರು. 
ಜಿಲ್ಲೆ

ವಜಾಗೊಳಿಸಿದ ನೌಕರರಿಗೆ ಕೆಲಸ ನೀಡಿ

ರುದ್ರಪ್ಪ ವಾಲಿ

ಮಾನ್ವಿ: ವಲಯ ಅರಣ್ಯ ಇಲಾಖೆಯಲ್ಲಿ ಅನೇಕ ವರ್ಷಗಳಿಂದ ದಿನಗೂಲಿ ಕೆಲಸ ಮಾಡುತ್ತಿದ್ದ ನೌಕರರನ್ನು ತೆಗೆದು ಹಾಕಿದ ಪರಿಣಾಮ ನೌಕರರು ಸಂಕಷ್ಟದಲ್ಲಿದ್ದು ಕೂಡಲೇ ಕೆಲಸ ನೀಡುವಂತೆ ಆಗ್ರಹಿಸಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜುಗೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮನವಿ ಸಲ್ಲಿಸಲಾಯಿತು.

ಬಾಡಿಗೆ ಕಟ್ಟಡ

ದಿನಗೂಲಿ ನೌಕರರು ಹಾಗೂ ಕರ್ನಾಟಕ ಜನ ಜಾಗೃತಿ ಸಮಿತಿ ತಾಲೂಕು ಅಧ್ಯಕ್ಷ ನಾಗರಾಜ ಮಾತನಾಡಿ, ತಾಲೂಕಿನ ಹಿರೇಕೊಟ್ನೆಕಲ್ ಗ್ರಾಮಕ್ಕೆ ಮಂಜೂರಾದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ನಿಲಯವನ್ನು ಮಾನ್ವಿ ಪಟ್ಟಣದ ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿದ್ದು ವಸತಿ ನಿಲಯದ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ನೀಡಬೇಕು.

ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಊಟದ ಮೇನುವಿನಲ್ಲಿರುವಂತೆ ಗುಣಮಟ್ಟದ ಆಹಾರ ನೀಡಬೇಕು. ಗ್ರಾಮೀಣ ಭಾಗದಲ್ಲಿರುವ ನಕಲಿ ವೈದ್ಯರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರಮುಖರಾದ ಬಸವನಗೌಡ, ಈರಪ್ಪ, ಸಿದ್ದಪ್ಪ, ವೀರೇಶನಾಯಕ ಇನ್ನಿತರರು ಇದ್ದರು.