ಸುಳ್ಯ: ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಪಂ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ದ.ಕ.ಜಿಲ್ಲೆ ಸಹಯೋಗದಲ್ಲಿ ಅಂಬೇಡ್ಕರ್ ಭವನ ಉರ್ವ ಸ್ಟೋರ್ ಮಂಗಳೂರು ಇಲ್ಲಿ ಜೂನ್ 7ರಂದು ಜಿಲ್ಲಾಮಟ್ಟದ ಮಕ್ಕಳ ಹಬ್ಬ 2023-24 ಜಾನಪದ ಗೀತೆ ಸ್ಪರ್ಧೆಯಲ್ಲಿ ಸುಳ್ಯದ ರೋಟರಿ ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದ್ದಾರೆ. ವಿದ್ಯಾರ್ಥಿನಿಯರಾದ ವಂಶಿಕಾ, ಪ್ರೇರಣಾ ಶೆಟ್ಟಿ, ವಿಭಾ, ಗಾನವಿ, ಮೇಘನಾ, ವಂದಿತಾ ವಿ.ಎಸ್.ಗಾಯನದಲ್ಲಿ ಪಾಲ್ಗೊಂಡಿದ್ದರು. ವಿದ್ಯಾರ್ಥಿ ಕೌಶಿಕ್ ಪ್ರಭು ತಬಲದಲ್ಲಿ ಸಹಕರಿಸಿದರು. ಶಿಕ್ಷಕಿ ನಳಿನಾಕ್ಷಿ ಕಲ್ಮಡ್ಕ ಹಾಗೂ ಕಲಾ ಶಿಕ್ಷಕರಾದ ಶ್ರೀಹರಿ ಪೈಂದೋಡಿ ತರಬೇತಿ ನೀಡಿದರು.