ಜಿಲ್ಲೆ

ಈಜು ಸ್ಪರ್ಧೆಯಲ್ಲಿ ಪ್ರಥಮ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ
ಶಿಕ್ಷಣ ಇಲಾಖೆ ವತಿಯಿಂದ ಇತ್ತೀಚೆಗೆ ಏರ್ಪಡಿಸಿದ್ದ ಜಿಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಧಾರವಾಡದ ಶ್ರೀಶೈಲ ಉಜ್ಜನಿಮಠ ಈಜು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾನೆ. ಇಲ್ಲಿನ ಮಲ್ಲಸಜ್ಜನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶ್ರೀಶೈಲ, ಈಜು ಸ್ಪರ್ಧೆಯಲ್ಲಿ 200 ಮೀ. ಫ್ರೀ ಸ್ಟೆಲ್​, ಬ್ಯಾಕ್​ ಸ್ಟ್ರೊಕ್​ ಸೇರಿ 3 ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದಾನೆ.