ಮಡಿಕೇರಿ: ಕೊಡಗು ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಆಯೋಜಿಸಿದ್ದ ಪ್ರಬಂಧ ಮತ್ತು ಚರ್ಚಾ ಸ್ಪರ್ಧೆಯಲ್ಲಿ ರವಿ ಮತ್ತು ಎಸ್.ಮೇಘ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಾಷ್ಟ್ರದ ಅರ್ಥವ್ಯವಸ್ಥೆಯ ಬೆಳವಣಿಗೆಗಳಲ್ಲಿ ಸಹಕಾರಿ ವಲಯದ ಪಾತ್ರ ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಬಡತನ ನಿರ್ಮೂಲನೆ, ಉದ್ಯೋಗ ಸೃಷ್ಠಿ, ಸಾಮಾಜಿಕ ನ್ಯಾಯ ವಿತರಣೆಗಳು ಸಹಕಾರಿ ವಲಯದಿಂದ ಮಾತ್ರವೇ ಜಾರಿಗೊಳಿಸಲು ಸಾಧ್ಯ ಎಂಬ ವಿಷಯದ ಬಗ್ಗೆ ಚರ್ಚಾ ಸ್ಪರ್ಧೆಯನ್ನು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿಏರ್ಪಡಿಸಲಾಯಿತು.
ಮೊದಲಿಗೆ ಜಿಲ್ಲೆಯ ವಿವಿಧ ಶಾಲೆಗಳಿಂದ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಪ್ರಬಂಧ ಮಂಡಿಸಿದರು. ನಂತರದಲ್ಲಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ವಿಷಯದ ಕುರಿತಾಗಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಚರ್ಚಾ ಸ್ಪರ್ಧೆಯ ತೀರ್ಪುಗಾರರಾಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಂ.ಈ.ಮೋಹನ್, ಯೂನಿಯನ್ ನಿರ್ದೇಶಕ ಕನ್ನಂಡ ಸಂಪತ್, ಕೆ.ಐ.ಸಿ.ಎಂ.ನ ಪ್ರಾಂಶುಪಾಲ ಡಾ.ಆರ್.ಎಸ್.ರೇಣುಕಾ ಹಾಗೂ ಪ್ರಬಂಧ ಪತ್ರಿಕೆಯ ಮೌಲ್ಯಮಾಪಕರಾಗಿ ಕೆ.ಐ.ಸಿ.ಎಂ.ನ ನಿವೃತ್ತ ಪ್ರಾಂಶುಪಾಲ ಎಂ.ಎಂ.ಶ್ಯಾಮಲಾರವರು ನಿರ್ವಹಿಸಿದರು.
ವೇದಿಕೆಯಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಬಿ.ಎ.ರಮೇಶ್ ಚಂಗಪ್ಪ, ಎನ್.ಎ.ರವಿ ಬಸಪ್ಪ ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬೆಳ್ಳಿ ಪದಕ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು.
ಪ್ರಬಂಧ ಸ್ಪರ್ಧೆಯಲ್ಲಿ ಕಾಕೋಟುಪರಂಬು ಪ್ರೌಢಶಾಲೆಯ ರವಿ(ಪ್ರಥಮ), ನಾಪೋಕ್ಲು ಶ್ರೀರಾಮ ಟ್ರಸ್ಟ್ ಆಂಗ್ಲ ಮಾದ್ಯಮ ಶಾಲೆಯ ಹರ್ಷಿತಾ ಕುಶಾಲಪ್ಪ(ದ್ವಿ), ಕೊಡಗರಹಳ್ಳಿ ಶಾಂತಿನಿಕೇತನ ಪ್ರೌಢಶಾಲೆಯ ಕೆ.ಕೆ.ಪ್ರಜ್ಞಾ(ತೃ), ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯ ಕೆ.ಎ.ಕಲ್ಪನಾ ಸಮಾದಾನಕರ ಬಹುಮಾನ ಪಡೆದುಕೊಂಡರು.
ಚರ್ಚಾ ಸ್ಪರ್ಧೆಯಲ್ಲಿ ಮಡಿಕೇರಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಎಸ್.ಮೇಘ(ಪ್ರ), ಕುಶಾಲನಗರ ವಿವೇಕಾನಂದ ಪದವಿಪೂರ್ವ ಕಾಲೇಜಿನ ಎಚ್.ಎಂ.ಭೂಮಿಕಾ(ದ್ವಿ), ಬಸವನಹಳ್ಳಿ ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜಿನ ಎಂ.ಆಕಾಶ್(ತೃ), ಗೋಣಿಕೊಪ್ಪ ಕಾವೇರಿ ಪದವಿ ಪೂರ್ವ ಕಾಲೇಜಿನ ಎ.ವಿಪಿನ್ ಸಮಾದಾನಕರ ಬಹುಮಾನ ಪಡೆದುಕೊಂಡಿದ್ದಾರೆ.