ಜಿಲ್ಲೆ

ಶಾಲೆಗಳಲ್ಲಿ ಮಕ್ಕಳ ಸುರಕ್ಷತೆಗೆ ಆದ್ಯತೆ ಇರಲಿ

Belagavi - Ravi Arjun Gosavi

ಬೆಳಗಾವಿ : ತಾಲೂಕಿನಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು, ಯಾವುದೇ ಕಾರಣಕ್ಕೂ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಮಕ್ಕಳನ್ನು ಕೂಡ್ರಿಸಿ ಪಾಠಗಳನ್ನು ಮಾಡುವಂತಿಲ್ಲ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ದಾಸಪ್ಪನವರ ಬೆಳಗಾವಿ ತಾಲೂಕಿನ ಎಲ್ಲ ಶಾಲೆಗಳ ಮುಖ್ಯಶಿಕ್ಷಕರಿಗೆ ಸೂಚಿಸಿದ್ದಾರೆ. ಸರ್ಕಾರಿ ಹಾಗೂ ಖಾಸಗಿಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಮಕ್ಕಳ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಅವರು ಎಲ್ಲ ಸಿಆರ್ ಪಿ ಹಾಗೂ ಬಿ.ಆರ್.ಪಿ ಅವರಿಗೂ ನಿರ್ದೇಶಿಸಿದ್ದಾರೆ.