ಜಿಲ್ಲೆ

ಮರಿತಿಬ್ಬೇಗೌಡರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ

ಲಲಾಟಾಕ್ಷ ಎಸ್

ಬೇಲೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮರಿತಿಬ್ಬೇಗೌಡರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಬೇಕು ಎಂದು ಪ್ರಾಂಶುಪಾಲರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಪಿ.ಎಸ್.ಮಂಜೇಗೌಡ ಕೋರಿದರು.


ಮರಿತಿಬ್ಬೇಗೌಡ ಅವರು ವಿದ್ಯಾರ್ಥಿ ಸಂಘಟನೆಯಲ್ಲಿ ತೊಡಗಿ, ಮೈಸೂರು ವಿವಿ ಸೆನೆಟ್, ಸಿಂಡಿಕೇಟ್ ಸದಸ್ಯರಾಗಿ, ಮುಕ್ತ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಶಿಕ್ಷಕರ ಹಲವಾರು ಸಮಸ್ಯೆಗಳನ್ನು ನಿವಾರಿಸುವಲ್ಲಿ ಯಶಸ್ಸು ಸಾಧಿಸಿದ್ದಾರೆ. ಶಿಕ್ಷಕ ಸಮುದಾಯ ಮತ್ತು ಸಂಘಟನೆಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ. ಶಿಕ್ಷಕರ ಬೇಡಿಕೆಗಳ ಈಡೇರಿಕೆಗಾಗಿ ಸದನದ ಒಳಗೆ, ಹೊರಗೆ ನಿರಂತರವಾಗಿ ಹೋರಾಡುತ್ತಿದ್ದಾರೆ. ಹಾಗಾಗಿ ಈ ಬಾರಿಯೂ ಅವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.


ಪುರಸಭೆ ಮಾಜಿ ಸದಸ್ಯ ಬಿ.ಎಲ್.ಧರ್ಮೆಗೌಡ, ತಾಪಂ ಮಾಜಿ ಸದಸ್ಯ ಮಂಜುನಾಥ್, ಕಾಂಗ್ರೆಸ್ ಮುಖಂಡ ರಾಯಾಪುರ ಶಿವಣ್ಣ ಇದ್ದರು.