ಜಿಲ್ಲೆ

ಮೂಲಸೌಕರ್ಯಕ್ಕೆ ಮೊದಲ ಆದ್ಯತೆ

ಪ್ರಸಿನ್ ಕೆ.ಆರ್

ರಾವಂದೂರು: ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಲಾಗಿದೆ ಎಂದು ಸಚಿವ ಕೆ. ವೆಂಕಟೇಶ್ ಹೇಳಿದರು.

ಪಿರಿಯಾಪಟ್ಟಣ ತಾಲೂಕು ಬೋಗನಹಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಗ್ರಾಮಗಳಿಗೆ ಬೇಕಾಗುವ ಮೂಲ ಸೌಕರ್ಯಗಳ ಪಟ್ಟಿ ತಯಾರಿಸಲಾಗಿದ್ದು, ಹಂತ ಹಂತವಾಗಿ ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದರು.

ರಾವಂದೂರು ಗ್ರಾ.ಪಂ. ವ್ಯಾಪ್ತಿಯ ಆರ್.ಡಿ. ಕೊಪ್ಪಲು, ಹರಳಹಳ್ಳಿ, ಭೋಗನಹಳ್ಳಿ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಗ್ರಾ.ಪಂ. ಅಧ್ಯಕ್ಷ ಸುನಿತಾ ವಾಸು, ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಡಿ.ಟಿ.ಸ್ವಾಮಿ, ರಾಮತ್ ಜಾನ್ ಬಾಬು , ಜಯಮರಿಗೌಡ, ಜಗದೀಶ್, ನಂದೀಶ್, ಕೀರ್ತಿ, ಸರಸ್ವತಿ, ಶಿವಕುಮಾರಿ ಮಾದೇವ, ಹರ್ಷಿಯಾ ಬಾನು, ಶಶಿ, ಇ.ಒ. ಸುನೀಲ್, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ್, ಪ್ರಶಾಂತ್, ಡಾಕ್ಟರ್ ಸೋಮಯ್ಯ , ಇಂಜಿನಿಯರ್ ಮಲ್ಲಿಕಾರ್ಜುನ್, ಪ್ರಸಾದ್, ಚಂದ್ರಶೇಖರ್, ಪಿಡಿಒ ಮಲ್ಲೇಶ್, ಕಾರ್ಯದರ್ಶಿ ಬಸವರಾಜ್ ಇತರರು ಇದ್ದರು.