ವಿಜಯವಾಣಿ ಸುದ್ದಿಜಾಲ ಧಾರವಾಡ
ಮೂರೂವರೆ ವರ್ಷದಿಂದ ಮೀಸಲಾತಿಗಾಗಿ ನಿರಂತರ ಹೋರಾಟ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಯಾವುದೇ ರೀತಿಯ ಸ್ಪಂದನೆ ಸಿಗುತ್ತಿಲ್ಲ. ಆದ್ದರಿಂದ 7ನೇ ಹಂತದ ಹೋರಾಟ ಆರಂಭಿಸಿದ್ದೇವೆ. ಪಂಚಮಸಾಲಿ ಮೀಸಲಾತಿ ಹಕ್ಕೊತ್ತಾಯಕ್ಕಾಗಿ ಸೆ. 22ರಂದು ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ವಕೀಲರ ಪ್ರಥಮ ರಾಜ್ಯ ಸಮಾವೇಶ ಆಯೋಜಿಸಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ನಗರದ ವಿದ್ಯಾವರ್ಧಕ ಸಂಘದಲ್ಲಿ ಬುಧವಾರ ಸಂಜೆ ಆಯೋಜಿಸಿದ್ದ ಲಿಂಗಾಯತ ಪಂಚಮಸಾಲಿ ವಕೀಲರ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹೋರಾಟದಲ್ಲಿ ಶಾಸಕಾಂಗವೂ ನಮ್ಮ ಬೇಡಿಕೆಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ಕಾನೂನಾತ್ಮಕ ಬೆಂಬಲ ಪಡೆಯಲು ವಕೀಲರ ಸಂಘಟನೆ ಮಾಡುತ್ತಿದ್ದೇವೆ. ಈಗಾಗಲೇ ಎಲ್ಲ ಕಡೆ ನೂತನ ಜಿಲ್ಲಾ ಘಟಕಗಳನ್ನು ಮಾಡಲಾಗುತ್ತಿದ್ದು, ಹಿರಿಯ ವಕೀಲರನ್ನು ಸಲಹಾ ಸಮಿತಿಗೆ ಆಯ್ಕೆ ಮಾಡಿದ್ದೇವೆ. ಬೆಳಗಾವಿ ಸಮಾವೇಶದಲ್ಲಿ ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕದ ಸುಮಾರು 5,000 ವಕೀಲರು ಪಾಲ್ಗೊಳ್ಳಲಿದ್ದಾರೆ. ಅಂದು ಕೆಲ ಕಠಿಣ ನಿರ್ಣಯಗಳನ್ನು ಅಂಗೀಕರಿಸುತ್ತೇವೆ. ವಕೀಲರ ಮೂಲಕ ಸರ್ಕಾರವನ್ನು ಎಚ್ಚರಿಸುವ ಕೆಲಸ ಮÁಡುತ್ತೇವೆ ಎಂದರು.
ಅಽಕಾರಕ್ಕೆ ಬಂದ ಮೇಲೆ ನಮ್ಮ ಸಮಾಜದ ಶಾಸಕರು ಮಾತನಾಡುತ್ತಿಲ್ಲ. ಹೀಗಾಗಿ ಶಾಸಕರಿಗೆ ಪತ್ರ ಕೊಟ್ಟು ಚಳವಳಿ ಮಾಡಿದ್ದೇವೆ. ಆದರೂ ಶಾಸಕರು ಧ್ವನಿ ಎತ್ತುತ್ತಿಲ್ಲ. ಅವರಲ್ಲಿ ಇಚ್ಛಾಸಕ್ತಿ ಕೊರತೆ ಎದ್ದು ಕಾಣುತ್ತಿದೆ ಎಂದರು.