ಜಿಲ್ಲೆ

ಮೀನು ಹಿಡಿಯಲು ಹೋದ ವ್ಯಕ್ತಿ ನೀರಿನಲ್ಲಿ ಮುಳಗಿ ಸಾವು

Haveri - Kariyappa Aralikatti

ಹಾವೇರಿ: ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬ ವರದಾ ನದಿಯಲ್ಲಿ ಮುಳಗಿ ಮೃತಪಟ್ಟ ಘಟನೆ ತಾಲೂಕಿನ ಹಂದಿಗನೂರ ಗ್ರಾಮದ ಬಳಿ ಸೋಮವಾರ ನಡೆದಿದೆ.
ಗಾಳೆಪ್ಪ ಸುರೇಶ ಮೇಲಿನಮನಿ (25) ಮೃತ ವ್ಯಕ್ತಿ.
ಈತ ಮೀನು ಹಿಡಿಯಲು ವರದಾ ನದಿಗೆ ಹೋದಾಗ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.