ಧಾರವಾಡ; ನಗರದ ಹೊರವಲಯದ ಮುಮ್ಮಿಗಟ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇತ್ತೀಚೆಗೆ ಸಂಭವಿಸಿದ ಅಪಘಾತವೊಂದು ಜಲಚರಗಳಿಗೆ ಮಾರಕವಾಗಿ ಪರಿಣಮಿಸಿದೆ. ಟ್ಯಾಂಕರ್ ಪಲ್ಟಿಯಾಗಿ ಅದರಲ್ಲಿದ್ದ ರಾಸಾಯನಿಕ ಸೋರಿಕೆಯಾಗಿ ನರೇಂದ್ರ ಗ್ರಾಮದ ಹಿರೇಕೆರೆಯ ಮೀನುಗಳ ಮಾರಣಹೋಮಕ್ಕೆ ಕಾರಣವಾಗಿದೆ.
ತಾಲೂಕಿನ ಮುಮ್ಮಿಗಟ್ಟಿ ಬಳಿ ನಾಲ್ಕು ದಿನಗಳ ಹಿಂದೆ ಟ್ಯಾಂಕರ್ ಪಲ್ಟಿಯಾಗಿತ್ತು. ಚಾಲಕ ಸೇರಿ ಅದರಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೆ, ಅದರಲ್ಲಿದ್ದ ರಾಸಾಯನಿಕ ಸೋರಿಕೆಯಾಗಿದ್ದರೂ ಯಾರೊಬ್ಬರೂ ಗಂಭೀರವಾಗಿ ಪರಿಗಣಿಸಿರಲಿಲ್ಲ. ನಿರಂತರ ಮಳೆಯಾಗುತ್ತಿರುವುದರಿಂದ ಮಳೆ ನೀರಿನೊಂದಿಗೆ ರಾಸಾಯನಿಕ ಸೇರಿ, ನರೇಂದ್ರ ಗ್ರಾಮದ ಹಿರೇಕೆರೆಗೆ ಸೇರಿದೆ.
2- 3 ದಿನಗಳಿಂದ ಕೆರೆಯಲ್ಲಿನ ಮೀನುಗಳು ಸತ್ತು ದಡ ಸೇರುತ್ತಿವೆ.